ಮಂಗಳೂರು: ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ನಗರದಲ್ಲಿನ ಕೆ ಎಂ ಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದದಾರೆ.
ಅಂದಹಾಗೇ ಈ ಹಿಂದೆಯೇ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಕೆಲ ದಿನಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು, ತಾವು ಮನೆಗೆ ಹೋಗಬೇಕು ಎಂಬುದಾಗಿ ಹಠ ಹಿಡಿದಿದ್ದರಂತೆ. ಈ ಕಾರಣದಿಂದ ಮನೆಗೆ ಆಕ್ಸಿಜನ್ ಸಮೇತ ಕಳುಹಿಸಿಕೊಟ್ಟಿದ್ದರು.




