Wednesday, October 22, 2025

Latest Posts

ವಿಶ್ವಕಪ್​ನಿಂದ ಹೊರಬಿದ್ದ ಪಾಕಿಸ್ತಾನ ಕ್ರಿಕೆಟ್ ತಂಡ, ಭಾರತದಲ್ಲೇ ಸೆಮಿಫೈನಲ್, ಫೈನಲ್ ಪಂದ್ಯ!

- Advertisement -

ಭಾರತದಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ಮಹಿಳಾ ತಂಡ ಹೊರಬಿದ್ದಿದೆ. ಆರು ಪಂದ್ಯಗಳಲ್ಲಿ ಪಾಕಿಸ್ತಾನ ನಾಲ್ಕು ಸೋಲು ಕಂಡು, ಇನ್ನು ಎರಡು ಪಂದ್ಯಗಳು ಮಳೆಯಿಂದಾಗಿ ರದ್ದಾದ ಕಾರಣ ಕೇವಲ 2 ಅಂಕಗಳನ್ನು ಮಾತ್ರ ಸಂಪಾದಿಸಿತು. ಇದರಿಂದಾಗಿ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆಯಲಾಗಿಲ್ಲ.

ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಪಾಕಿಸ್ತಾನ 150 ರನ್‌ಗಳಿಂದ ಭಾರೀ ಸೋಲು ಕಂಡಿತು. ಮಳೆಯ ಕಾರಣ ಪಂದ್ಯ 40 ಓವರ್‌ಗೆ ಸೀಮಿತವಾಗಿದ್ದು, ದಕ್ಷಿಣ ಆಫ್ರಿಕಾ 312 ರನ್ ಗಳಿಸಿದರೆ, ಪಾಕಿಸ್ತಾನ 20 ಓವರ್‌ಗಳಲ್ಲಿ ಕೇವಲ 83 ರನ್‌ಗಳನ್ನು ಮಾತ್ರ ಗಳಿಸಿತು. ಇನ್ನು ಎರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದು ಪರಿಣಾಮ ಪಾಕಿಸ್ತಾನ ಕೇವಲ 2 ಅಂಕಗಳನ್ನು ಮಾತ್ರ ಪಡೆದಿದೆ. ಹೀಗಾಗಿ ಪಾಕಿಸ್ತಾನ ತಂಡ ಮಹಿಳಾ ಏಕದಿನ ವಿಶ್ವಕಪ್ ಸೆಮಿಫೈನಲ್ ರೇಸ್​ನಿಂದ ಹೊರಬಿದ್ದಿದೆ.

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಹೊರಬಿದ್ದ ನಂತರ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಈಗಾಗಲೇ ಸೆಮಿಫೈನಲ್‌ಗೆ ಮುನ್ನಡೆದಿವೆ. ಭಾರತ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡಗಳು ಉಳಿದ ಒಂದು ಸ್ಥಾನಕ್ಕಾಗಿ ಕಠಿಣ ಪೈಪೋಟಿ ನಡೆಸುತ್ತಿವೆ. ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಭಾರತದಲ್ಲೇ ನಡೆಯಲಿವೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss