Saturday, May 10, 2025

Latest Posts

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ.

- Advertisement -

Hubli News: ಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯ ಸಭಾ ಸದಸ್ಯ‌ ನಾಸೀರ ಹಿಸೇನ್ ರಾಜೀನಾಮೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಬಿಜೆಪಿ ಮುಖಂಡರು, ಕಾಂಗ್ರೆಸ್ ನಾಯಕರ ವಿರುದ್ಧ ಹಾಗೂ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ದಿನ ರಾಜ್ಯ ಸಭಾ ಚುನಾವಣೆ ನಡೆದ ನಂತರ ಕಾಂಗ್ರೆಸ್ ನಾಯಕರು ವಿಜಯೋತ್ಸವ ಮಾಡುತ್ತಿದ್ದರು. ನೂತನ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ನಾಸೀರ ಹುಸೇನ ಬೆಂಬಲಿಗರು ಮತ್ತು ಕಾಂಗ್ರೆಸ್ ನಾಯಕರು ಈ ವೇಳೆ ಇದ್ಧು, ಇಂತಹ ಸಂದರ್ಭದಲ್ಲಿ ನಾಸೀರ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಇದೂ ಕಾಂಗ್ರೆಸ್ ನಾಯಕರ ತುಷ್ಟೀಕರಣ ರಾಜಕಾರಣಕ್ಕೆ ಕೈಗನ್ನಡಿಯಾಗಿದೆ. ಈ ಕೂಡಲೇ ನೂತನವಾಗಿ ಆಯ್ಕೆಯಾದ ರಾಜ್ಯ ಸಭಾ ಸದಸ್ಯ ನಾಸೀರ ಹುಸೇನ್ ಅವರು ರಾಜೀನಾಮೆ ನೀಡಬೇಕು. ಜೊತೆಗೆ ಘೋಷಣೆ ಕೂಗಿದ ಎಲ್ಲರನ್ನು ತನಿಖೆಗೆ ಒಳಪಡಿಸಿ ಇದರ ಹಿಂದೆ ಇರುವ ಸತ್ಯ ಬಯಲಿಗೆ ತರಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ್ ಬೊಮ್ಮಾಯಿ

ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ

ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ

- Advertisement -

Latest Posts

Don't Miss