- Advertisement -
Dharwad News: ಧಾರವಾಡ: ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆ ವತಿಯಿಂದ ರೌಡಿ ಶೀಟರ್‌ಗಳು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದವರ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದವರನ್ನು ಕರೆಯಿಸಿ ಅವರ ಪರೇಡ್ ನಡೆಸಲಾಯಿತು. ಧಾರವಾಡದ ದೈವಜ್ಞ ಕಲ್ಯಾಣಮಂಟಪದಲ್ಲಿ ನಡೆಸಲಾದ ಈ ರೌಡಿ ಪರೇಡ್‌ನಲ್ಲಿ ಕೈಂ ವಿಭಾಗದ ಡಿಸಿಪಿ, ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳು ಪಾಲ್ಗೊಂಡು ರೌಡಿ ಶೀಟರ್‌ಗಳಿಗೆ ಖಡಕ್ ಸಂದೇಶ ರವಾನಿಸಿದರು.
ಸಾರ್ವಜನಿಕರಿಗೆ ತೊಂದರೆಯುಂಟು ಮಾಡದಂತೆ ಜೀವನ ನಡೆಸಬೇಕು. ಸಾರ್ವಜನಿಕ ಸ್ಥಳದಲ್ಲಿ ಕುಳಿತು ಮದ್ಯಪಾನ ಮಾಡಿ ಇತರರಿಗೆ ತೊಂದರೆ ಕೊಟ್ಟರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಖಡಕ್ ಸಂದೇಶವನ್ನು ಅವರಿಗೆ ರವಾನಿಸಲಾಯಿತು.
- Advertisement -