www.karnatakatv.net : ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದಂತೆ ಜುಲೈ 19 ಹಾಗೂ 22 ರಂದು ಎಸೆಸೆಲ್ಸಿ ಪರೀಕ್ಷೆ ನಡೆಸಲು ಸಿದ್ದರಾಗಿದ್ದಾರೆ. ಹಾಗೇ ಪ್ರೌಢ ಶಿಕ್ಷಣ ಮಂಡಳಿ, ಜಿಲ್ಲಾಡಳಿಗಳು ಎಲ್ಲ ರೀತಿಯ ಸಿದ್ದತೆಗಳನ್ನು ನಡೆಸಿವೆ. ಶಾಲಾ ಮುಖ್ಯೋ ಪಾಧ್ಯಾಯರ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಆನ್‌ಲೈನ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಈಗಾಗಲೇ ಅವಕಾಶ ನೀಡಿದ್ದರಿಂದ ಬಹುತೇಕ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲಾ ಮುಖ್ಯಶಿಕ್ಷಕರು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಆದರೆ ಕೆಲವೇ ಕೆಲವು ಖಾಸಗಿ ಶಾಲೆಗಳು ಶುಲ್ಕ ಪಾವತಿಸದ ವಿದ್ಯಾರ್ಥಿ ಗಳಿಗೆ ಪ್ರವೇಶ ಪತ್ರ ನೀಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಗೊಂದಲ ಹಾಗೂ ಆತಂಕಕ್ಕೆ ಒಳಗಾಗಿದ್ದಾರೆ. ಸರಕಾರ ಮತ್ತು ಶಿಕ್ಷಣ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶ ಪತ್ರ ದೊರೆಯುವಂತೆ ಮಾಡಬೇಕು. ಈಗಾಗಲೇ ಬಿಇಓ ಕಚೇರಿ ಮೂಲಕ ಪ್ರವೇಶ ಪತ್ರ ಪಡೆಯಬಹುದೆಂಬ ನಿರ್ಧಾರ ಕೈಗೊಂಡಿದ್ದು, ಇದು ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು.
ಶಾಲೆಯಲ್ಲಿ ದಾಖಲಾತಿ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಳು ಮಾಡುವುದು ಸರಿಯಲ್ಲ. ಕೊರೊನಾ ತಂದೊಡ್ಡಿರುವ ಹಲವು ರೀತಿಯ ಸಮಸ್ಯೆ, ಆರ್ಥಿಕ ಸಂಕಷ್ಟದಿಂದ ಶುಲ್ಕ ಪಾವತಿಸಲೂ ಸಾಧ್ಯವಾಗದೇ ಇರಬಹುದು. ಮುಂದೆ ಕಂತುಗಳ ರೂಪ ದಲ್ಲಿ ಶುಲ್ಕ ಪಾವತಿ ಮಾಡಬಹುದು. ಇದಕ್ಕಾಗಿ ಮಕ್ಕಳ ಹೆತ್ತವರಿಗೆ ಸರಕಾರವೇ ಸಮಯಾವಕಾಶ ಕಲ್ಪಿಸಬೇಕಾಗುತ್ತದೆ. ಇವೆರೆಲ್ಲದಕ್ಕೂ ಮಿಗಿಲಾಗಿ ಎಲ್ಲರಿಗೂ ಪ್ರವೇಶ ಪತ್ರ ಸಿಗುವಂತೆ ಮಾಡಬೇಕು. ಎಂದು ಪ್ರೌಢ ಶಿಕ್ಷಣ ಮಂಡಳಿ