Dharwad News: ಧಾರವಾಡ: ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ಸ್ವಚ್ಛತಾ ಕಾರ್ಯಕ್ಕೆ ಚಾಲನೆ
ಬೆಳಗ್ಗೆ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಸುತ್ತ ಮುತ್ತಲಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ವೇಳೆ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ ಜೆ, ಪಾಲಿಕೆಯ ಪೌರ ಕಾರ್ಮಿಕರು ಜೊತೆಗಿದ್ದರು.
ಗಬ್ಬೂರಿನ ಕಾಲುವೆ ಪರಿಶೀಲನೆ
ಹುಬ್ಬಳ್ಳಿಯ ಗಬ್ಬೂರಿನಲ್ಲಿರುವ ಕೆಳ ಹಂತದ ಕಾಲುವೆಯ ಸ್ಥಿತಿಗತಿಗಳನ್ನು ಪರಿಶೀಲಿಸಲಾಯಿತು. ಆದಷ್ಟು ಬೇಗ ದುಸ್ಥಿತಿಯಲ್ಲಿರುವ ಕಾಲುವೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹೊಲಿಗೆ ಯಂತ್ರ ವಿತರಣೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲ ಅವರ ವಾರ್ಡಿನಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಸಚಿವರು ವಿತರಿಸಿದರು.
ಅಹವಾಲು ಸ್ವೀಕಾರ
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಕೇಶ್ವಾಪುರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸಚಿವರು ಸ್ವೀಕರಿಸಿದರು. ನಾಗರಿಕರ ಕುಂದುಕೊರತೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಈ ವೇಳೆ ಸಚಿವರು ಭರವಸೆ ನೀಡಿದರು.