Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಾಲು, ಡಿಸೇಲ್ ಸೇರಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇದನ್ನು ವಿರೋಧಿಸಿ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್‌ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ. ಆದರೆ ಅದಕ್ಕೂ ಮುನ್ನ ವಿಜಯೇಂದ್ರ ಮತ್ತು ಬಿಜೆಪಿ ನಾಾಯಕರು ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವದ ಹಿನ್ನೆಲೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಈ ಬಗ್ಗೆ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಅಹೋರಾತ್ರಿ ಧರಣಿ ಮುಂದುವರೆದಿದ್ದು ಲೋಕಸಭೆಯಲ್ಲಿ ತಡರಾತ್ರಿ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಪಕ್ಷದ ಪ್ರಮುಖರು ಹಾಗೂ ಶಾಸಕರೊಂದಿಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಹಲವಾರು ದಶಕಗಳಿಂದ ವಕ್ಫ್ ಕಾಯಿದೆ ಬಗ್ಗೆ ದೇಶ- ರಾಜ್ಯದಲ್ಲಿ ಚರ್ಚೆ ನಡೆಯುತ್ತಿತ್ತು. ನಮ್ಮ ರಾಜ್ಯದಲ್ಲಿ ಸಾವಿರ ವರ್ಷಗಳ ಇತಿಹಾಸ ಇರುವ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳ ಜಮೀನನ್ನು, ರಾಜ್ಯದ ಲಕ್ಷ ಲಕ್ಷ ರೈತರ ಜಮೀನನ್ನು ಕೂಡ ವಕ್ಫ್ ಬೋರ್ಡ್ ಹೆಸರು ಹೇಳಿಕೊಂಡು ಕಿತ್ತುಕೊಳ್ಳುವ ಕೆಲಸ ನಡೆದಿತ್ತು ಇದರ ವಿರುದ್ಧ ಬಿಜೆಪಿ, ಕೆಲ ತಿಂಗಳುಗಳ ಹಿಂದೆ ಪ್ರತಿಭಟನೆ ಮಾಡಿತ್ತು. ಕೇಂದ್ರದಲ್ಲಿ ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರಮೋದಿ ಜೀ ಅವರ ನೇತೃತ್ವದ NDA ಸರ್ಕಾರವು ವಕ್ಫ್ ಮಂಡಳಿ ಹೆಸರಿನಲ್ಲಿ ದೇಶ, ರಾಜ್ಯದ ಜನರಿಗೆ ಆಗುತ್ತಿದ್ದ ದೋಖಾ, ಅನ್ಯಾಯ ಸರಿಪಡಿಸಲು ಈ ಈ ಮಸೂದೆ ಜಾರಿಗೆ ತಂದಿರುವುದನ್ನು ಹಿಂದೂಗಳಷ್ಟೇ ಅಲ್ಲ, ಮುಸಲ್ಮಾನರೂ ಸ್ವಾಗತಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.