ಪರಿಶಷ್ಟ ಜಾತಿ, ಪರಿಶಷ್ಟ ಪಂಗಡ ಮತ್ತು ಬುಡಕಟ್ಟು ಜನಾಂಗದವರಿಗೆ ಶಿಕ್ಷಣ ಸಂಸ್ಥೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ತಳ್ಳಿ ಹಾಕಿದೆ.
ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ವಿಧಾನಸಭೆಯು ಕಳೆದ ವರ್ಷ ನವೆಂಬರ್ನಲ್ಲಿ ಬಿಹಾರದ ಹುದ್ದೆಗಳು ಮತ್ತು ಸೇವೆಗಳಲ್ಲಿನ ಖಾಲಿ ಹುದ್ದೆಗಳ ತಿದ್ದುಪಡಿ ಮಸೂದೆ ಮತ್ತು ಬಿಹಾರ ಮೀಸಲಾತಿ ತಿಡ್ಡುಪಡಿಯನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು. ಬಿಲ್ 2023 ಕೋಟಾವನ್ನು ಹಿಂದಿನ 50% ರಿಂದ 65%ಕ್ಕೆ ಹೆಚ್ಚಿಸಲು ದಾರಿ ಮಾಡಿಕೊಡುತ್ತದೆ. ಉಳಿದ 35% ಕೋಟಾವನ್ನು ಸಾಮಾನ್ಯ ವರ್ಗಕ್ಕೆ ಬಿಡಲಾಗಿತ್ತು. ಈ ಅಧಿಸೂಚನೆಯನ್ನು ನವೆಂಬರ್ 21, 2023 ರಂದು ಹೊರಡಿಸಲಾಗಿತ್ತು.
ಆದರೆ, ಈ ಕಾಯ್ದೆಗೆ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ನೇತೃತ್ವದ ವಿಭಾಗೀಯ ಪೀಠವು ತಡೆ ನೀಡಿದೆ. ಇದರಿಂದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಭಾರಿ ಹಿನ್ನಡೆಯಾಗಿದೆ ಎನ್ನಲಾಗಿದೆ.
2023ರ ನವೆಂಬರ್ 21ರಂದು ಮೀಸಲಾತಿಯನ್ನು ಶೇ 50ರಿಂದ 63ಕ್ಕೆ ಏರಿಕೆ ಮಾಡುವ ಪ್ರಸ್ತಾವಕ್ಕೆ ಬಿಹಾರ ಸಚಿವ ಸಂಪುಟ ಅನುಮೋದನೆ ನೀಡಿ, ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸುಮಾರು ಹತ್ತಕ್ಕೂ ಮೇಲ್ಮನವಿಗಳನ್ನು ಹೈಕೋರ್ಟ್ಗೆ ಸಲ್ಲಿಸಲಾಗಿತ್ತು.
Bihar : ನಿತೀಶ್ ನಿರ್ಧಾರಕ್ಕೆ ಹೈಕೋರ್ಟ್ ತಡೆ
- Advertisement -
- Advertisement -