ರಾಯಚೂರಿನ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ. ಅವರು ಇತ್ತೀಚೆಗೆ ನಡೆದ RSS ಪಥಸಂಚಲನದಲ್ಲಿ ಭಾಗವಹಿಸಿರುವ ಘಟನೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ಸರ್ಕಾರಿ ಅಧಿಕಾರಿಯಾಗಿರುವ ಪ್ರವೀಣ್ ಕುಮಾರ್ ಅವರು ಶಾಸಕರಾದ ಮಾನಪ್ಪ ವಜ್ಜಲ್ ಅವರೊಂದಿಗೆ RSS ನ ಸಮವಸ್ತ್ರ ಧರಿಸಿ, ಕೈಯಲ್ಲಿ ದೊಣ್ಣೆ ಹಿಡಿದು ಪಥಸಂಚಲನದಲ್ಲಿ ಭಾಗಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ.
ಈ ಕ್ರಮವು ಸರ್ಕಾರದ ನೌಕರರ ನಡವಳಿಕೆ ನಿಯಮಾವಳಿಗೆ ವಿರುದ್ಧವಾಗಿದ್ದು, ಸಂವಿಧಾನದ ಆಶಯಗಳಿಗೂ ಧಕ್ಕೆ ತರುತ್ತದೆ ಎಂದು ಕಾರ್ಮಿಕ ಸಂಘಟನೆಯ ಮುಖಂಡ H.M. ಬಾಬು ಆರೋಪಿಸಿದ್ದಾರೆ.
ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಿ, ಪಿಡಿಒ ಪ್ರವೀಣ್ ಕುಮಾರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಹಾಗೂ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ. ಈ ಘಟನೆ ಸಂಬಂಧ ಸ್ಥಳೀಯ ಆಡಳಿತದಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
ವರದಿ : ಲಾವಣ್ಯ ಅನಿಗೋಳ