ಮೋದಿ ಸರ್ಕಾರದ ನಡೆಗೆ ಜನರೇ ಉತ್ತರ ಕೊಟ್ಟಿದ್ದಾರೆ: H. K. ಪಾಟೀಲ್

ಹುಬ್ಬಳ್ಳಿಯಲ್ಲಿ ಕಾನೂನು ಸಚಿವ H. K. ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಹಾಗೂ ಡಿಲಿಮಿಟೇಶನ್ ಮಸೂದೆ ಜಾರಿಗೆ ವಿರೋಧ ವ್ಯಕ್ತವಾಗಿರುವ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದು, ಅದಕ್ಕೆ ತಕ್ಕ ಉತ್ತರ ಜನರಿಂದಲೇ ಸಿಕ್ಕಿದೆ ಎಂದು ಪಾಟೀಲ ಹೇಳಿದ್ದಾರೆ. ದೇಶದ ಒಟ್ಟು ರಾಜಕೀಯ ಸಮೀಕರಣವನ್ನೇ ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದರು.

ಡಿಲಿಮಿಟೇಶನ್ ಕಾನೂನನ್ನು ಪ್ರತ್ಯೇಕವಾಗಿ ಜಾರಿಗೆ ತರುವ ಬದಲು, ಮಹಿಳಾ ಮೀಸಲಾತಿ ಮಸೂದೆ ಜೊತೆಗೆ ಜಂಟಿಯಾಗಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕ್ರಮವನ್ನು ವಿರೋಧ ಪಕ್ಷಗಳು ಸಹ ಯಾವುದೋ ಮಟ್ಟಿಗೆ ಒಪ್ಪಿಕೊಂಡಿರಬಹುದು ಎಂಬ ಶಂಕೆಯನ್ನೂ ಅವರು ವ್ಯಕ್ತಪಡಿಸಿದರು.

ಮಹಿಳಾ ಮೀಸಲಾತಿ ಹೆಸರಿನಲ್ಲಿ ರಾಜಕೀಯ ಮಾಡುವ ಪ್ರಯತ್ನ ನಡೆಯುತ್ತಿದೆ. ಆದರೆ ಮಹಿಳೆಯರನ್ನೇ ಮುನ್ನೆಲೆಗೆ ತಂದು ನಡೆಸುವ ಈ ರಾಜಕಾರಣಕ್ಕೆ ಮಹಿಳೆಯರಲ್ಲಿಯೇ ವಿರೋಧ ವ್ಯಕ್ತವಾಗಿದೆ ಎಂದು ಹೇಳಿದರು.

2023ರಲ್ಲಿಯೇ ಹಳೆಯ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರುವ ಪ್ರಯತ್ನ ನಾನು ಮಾಡಿದ್ದೆ. ಈಗ ಅದೇ ಮಸೂದೆಯಲ್ಲಿ ಕೆಲ ತಿದ್ದುಪಡಿ ಮಾಡಿ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದರು. ಈ ರೀತಿಯ ಜಂಟಿ ಜಾರಿಗೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಎಚ್.ಕೆ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.

About The Author