ಕೊರೊನಾ ರೂಪಾಂತರಿ ಬಗ್ಗೆ ಧಾರವಾಡ ಜಿಲ್ಲೆಯ ಜನ ಭಯಪಡಬೇಕಿಲ್ಲ – ಡಿಸಿ ಅಭಯ

Dharwad News: ಧಾರವಾಡ: ಕೇರಳ ಸೇರಿದಂತೆ ಅನೇಕ ಕಡೆಗಳಲ್ಲಿ ಕೊರೊನಾ ರೂಪಾಂತರಿ ವೈರಸ್ ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ರಾಜ್ಯದಲ್ಲೂ ಈ ಸಂಬಂಧ ಮಾರ್ಗಸೂಚಿ ಹೊರಡಿಸುವ ಜೊತೆಗೆ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯ ಸರ್ಕಾರ ಕೊರೊನಾ ರೂಪಾಂತರಿ ಬಗ್ಗೆ ಸಾಕಷ್ಟು ಎಚ್ಚರ ವಹಿಸಿದೆ. ಜನ ಕೂಡ ಸುರಕ್ಷತೆಯಿಂದ ಇದ್ದು, ಮಾಸ್ಕ್‌ಗಳನ್ನು ಬಳಸುವುದು ಅಷ್ಟೇ ಅವಶ್ಯವಾಗಿದೆ. ಧಾರವಾಡ ಜಿಲ್ಲಾಡಳಿತ ಈ ವೈರಸ್ ಎದುರಿಸಲು ಸಜ್ಜಾಗಿದೆ. ಹಾಗಂತ ಯಾರೂ ಈ ವೈರಸ್ ಬಗ್ಗೆ ಭಯಪಡಬೇಕಿಲ್ಲ ಎಂಬುದನ್ನು ಸ್ವತಃ ಜಿಲ್ಲಾಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ

ಕಾಣಿಸಿಕೊಂಡಿದ್ದ ಕೊರೊನಾ ಸೋಂಕನ್ನು ಜಿಲ್ಲಾಡಳಿತ ಅಚ್ಚುಕಟ್ಟಾಗಿ ನಿಭಾಯಿಸಿದ್ದು, ಈಗ ರೂಪಾಂತರಿ ವೈರಸ್‌ಅನ್ನು ಕೂಡ ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಧಾರವಾಡ ಜಿಲ್ಲೆಯಲ್ಲಿ 5 ಸಾವಿರಕ್ಕೂ ಹೆಚ್ಚು ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. 1500 ಕ್ಕೂ ಹೆಚ್ಚು ಆಕ್ಸಿಜನ್ ಬೆಡ್ ಹಾಗೂ 500ಕೂ ಹೆಚು, ಐಸಿಯು ಬೆಡ್ ವ್ಯವಸ್ಥೆ ಇದೆ. ಇದರ ಜೊತೆಗೆ ತಾಲೂಕಾ ಆಸ್ಪತ್ರೆಗಳಲ್ಲೂ ಆಕ್ಸಿಜನ್ ಸಹಿತ ಬೆಡ್‌ಗಳ ವ್ಯವಸ್ಥೆಯನ್ನು ಮಾಡಿಟ್ಟುಕೊಳ್ಳಲಾಗಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಸಾರ್ವಜನಿಕರು ಮಾಸ್ಕ್‌ಗಳನ್ನು ಹಾಕಿಕೊಂಡು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರಿಂದ ಕೊರೊನಾ ರೂಪಾಂತರಿ ವೈರಸ್‌ನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ. ಇದರ ಜೊತೆಗೆ ಕೈಗಳನ್ನು ಆಗಾಗ ಸ್ವಚ್ಛವಾಗಿ ತೊಳೆದುಕೊಳ್ಳುವುದರ ಮೂಲಕ ಆರೋಗ್ಯದತ್ತ ಕಾಳಜಿ ವಹಿಸಬೇಕಿದೆ. ಧಾರವಾಡ ಜಿಲ್ಲಾಡಳಿತ ಈ ಬಗ್ಗೆ ಸಾಕಷ್ಟು ಮುಂಜಾಗೃತೆ ವಹಿಸಿದ್ದು, ಧಾರವಾಡ ಮಾತ್ರವಲ್ಲದೇ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೂ ಸಹಾಯ ಮಾಡುವ ಸಾಮರ್ಥ್ಯವನ್ನು ಜಿಲ್ಲಾಡಳಿತ ಹೊಂದಿದೆ.

‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’

ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್

‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’

About The Author