Tuesday, December 10, 2024

Latest Posts

ಬಿಜೆಪಿ ಮಹಿಳೆಯರ, ಬಡವರ ವಿರೋಧಿಗಳು ಎಂಬುದನ್ನು ಜನರಿಗೆ ಅರ್ಥಮಾಡಿಸಬೇಕು: ಸಿಎಂ ಸಿದ್ದರಾಮಯ್ಯ

- Advertisement -

Political News: ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಇಂದಿರಾಗಾಂಧಿಯವರ ಬಗ್ಗೆ ಮಾತನಾಡಿದ್ದು, ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ ಸಂವಿಧಾನ ಬದಲಾಗಬೇಕೆಂದು ಬಯಸುವ ಪಕ್ಷ. ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದಿದ್ದಾರೆ.

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ ಈ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಮಹಾತ್ಮ ಗಾಂಧಿ ದೇಶದಲ್ಲಿ ಗ್ರಾಮ ಸ್ವರಾಜ್ಯವಾಗಬೇಕೆಂದು ಬಯಸಿದ್ದರು. ಮಹಿಳೆಯರಿಗೆ ಮೀಸಲಾಗಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜೀವ್ ಗಾಂಧಿಯವರು ಅಧಿಕಾರದಲ್ಲಿದ್ದಾಗ ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣದ ಮೂಲಕ ಪಟ್ಟಣ ಪಂಚಾಯತಿ, ನಗರಸಭೆಗಳಿಗೆ ಮಹಿಳಾ ಮೀಸಲಾತಿ ನೀಡಿದರು. ಇದಾಗದೇ ಹೋಗಿದ್ದರೆ ಮಹಿಳೆಯರಿಗೆ 55% ಮೀಸಲಾತಿ ದೊರೆಯುತ್ತಿರಲಿಲ್ಲ. ರಾಮಾ ಜೋಯಿಸ್ ಎಂಬ ಬಿಜೆಪಿ ಸಂಸದರು ಇದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿದ್ದರು. ಅಧಿಕಾರ ಹಂಚಿಕೆಯಾಗಬೇಕೆಂದಿದ್ದರೆ ಅವರು ನ್ಯಾಯಾಲಯಕ್ಕೆ ಯಾಕೆ ಹೋಗುತ್ತಿದ್ದರು? ಕಾಂಗ್ರೆಸಿನ ಕೆಲವರಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಇಲ್ಲದ ಕಾರಣಕ್ಕೆ ಅವರು ಹಾಗೂ ಇರಲಿ, ಹೀಗೂ ಇರಲಿ ಎನ್ನುತ್ತಾರೆ. ಸ್ಪಷ್ಟತೆ ಇಲ್ಲದೇ ಹೋದರೆ ಕಾಂಗ್ರೆಸ್ ಸಿದ್ಧಾಂತವನ್ನು ಬೆಳೆಸಲು ಸಾಧ್ಯವಿಲ್ಲ. ಬಿಜೆಪಿ ಮಹಿಳೆಯರ, ಬಡವರ ವಿರೋಧಿಗಳು ಎಂಬುದನ್ನು ಜನರಿಗೆ ಅರ್ಥಮಾಡಿಸಬೇಕು ಎಂದು ಸಿಎಂ ಹೇಳಿದ್ದಾರೆ.
https://youtu.be/VxQ5yp2lsK8
ಬಿಜೆಪಿ ನಾಯಕರು ದೇಶಭಕ್ತಿಯ ಬಗ್ಗೆ ಉದ್ದನೆಯ ಭಾಷಣ ಮಾಡುತ್ತಾರೆ ಅಷ್ಟೇ. ದೇಶಭಕ್ತಿ ಉಳಿದಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ. ಇದರ ಆಧಾರದ ಮೇಲೆ ಈ ದೇಶವನ್ನು, ನಾಡನ್ನು ಕಟ್ಟಬೇಕಾಗುತ್ತದೆ. ಇಂದಿರಾ ಗಾಂಧಿಯವರನ್ನು ನೆನೆಸಿಕೊಂಡು ಅವರಿಂದ ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ಮೀಸಲಾತಿಯನ್ನು 2028 ರಲ್ಲಿ ಕೊಡುವುದಾಗಿ ಹೇಳುವ ನರೇಂದ್ರ ಮೋದಿ ಅವರು ಅದನ್ನು ಈಗಲೇ ಮಾಡಬಹುದಿತ್ತು. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ಅಗತ್ಯವಿದೆ. ಸಂಸತ್ತಿನಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ, ನಾವೇ ಇದನ್ನು ಜಾರಿಗೆ ತರಬೇಕು ಎಂದಿದ್ದೆವು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು. ಸಂಸತ್ತು, ವಿಧಾನಸಭೆಯಲ್ಲಿಯೂ ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
https://youtu.be/tPP9l2S6QqE
ಸರ್ಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿದೆ ಎಂದು ಮಾದ್ಯಮಗಳು ಬರೆದಿವೆ, ಆದರೆ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಸೂಚಿಸಲಾಗಿದೆ. ಎಲ್ಲಾ ಬಡವರಿಗೂ ಸೌಲಭ್ಯ ದೊರಕಬೇಕು. ಅನರ್ಹರಿಗೆ ಮಾತ್ರ ಎಪಿಎಲ್ ಕಾರ್ಡು ನೀಡಬೇಕು ಎಂದು ಹೇಳಿದ್ದೇನೆ. ಕಾಂಗ್ರೆಸ್ ಪಕ್ಷ ಈ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ. ಅವರು ಯಾವತ್ತೂ ಶ್ರೀಮಂತರ, ಮೇಲ್ಜಾತಿಯವರ ಪರ. 1925 ರಲ್ಲಿ ಆರ್.ಎಸ್.ಎಸ್ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೆ ಪ್ರಜಾಪ್ರಭುತ್ವ, ಮೀಸಲಾತಿ, ಸಂವಿಧಾನದ ಪರವಾಗಿ ಮಾತನಾಡಿಲ್ಲ. ಕಾಂಗ್ರೆಸ್ ಸಿದ್ದಾಂತದಲ್ಲಿ ನಂಬಿಕೆ ಇಟ್ಟು ಕೆಲಸ ಮಾಡೋಣ, ಪಕ್ಷವನ್ನು ಬಲಪಡಿಸುವ ಕೆಲಸ ಮಾಡೋಣ ಎಂದು ಶಪಥ ಮಾಡೋಣ ಎಂದು ಸಿಎಂ ಹೇಳಿದರು.
https://youtu.be/r2aFJqqnBgg
- Advertisement -

Latest Posts

Don't Miss