Hubli News: ಹುಬ್ಬಳ್ಳಿ: ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಅವರು ಪತ್ರಕರ್ತೆಯೊಬ್ಬರ ಜೊತೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಸರಿಯಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾರವಾರದಲ್ಲಿ ನಡೆದ ಸಭೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕರ್ತೆಯೊಬ್ಬರು ಕೇಳಿರುವ ಪ್ರಶ್ನೆಗೆ ಹೀಗೆ ಮಾತನಾಡುವುದು ಸರಿಯಲ್ಲ. ಹಿರಿಯ ರಾಜಕಾರಣಿಯಾಗಿ ಪತ್ರಕರ್ತರ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಬೇಕು. ಅದನ್ನು ಬಿಟ್ಟು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದರು.
ಪತ್ರಕರ್ತರು ತಮ್ಮ ಜಿಲ್ಲೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಾರೆ. ಜನಪ್ರತಿನಿಧಿಗಳಾದವರು ಮಾಧ್ಯಮದ ಪ್ರತಿನಿಧಿಗಳನ್ನು ಗೌರವಿಸುವ ಮೂಲಕ ಪ್ರಶ್ನೆಗೆ ಸರಿಯಾದ ಉತ್ತರ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಗಿದ್ದೇನು..?
ಹಿರಿಯ ಪತ್ರಕರ್ತೆ ರಾಧಾ ಹೀರೇಗೌಡರ್ ಅವರು ಉತ್ತರಕನ್ನಡದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಪ್ರಶ್ನಿಸಿದಾಗ, ನಿನ್ನ ಹೆರಿಗೆ ಅಲ್ಲೇ ಮಾಡಿಸೋಣ ಬಿಡು ಎಂದು ದೇಶಪಾಂಡೆ ಉದ್ಧಟತನದ ಮಾತನ್ನಾಡಿದ್ದಾರೆ.

