Friday, August 29, 2025

Latest Posts

ಬೈಕ್ ಟ್ಯಾಕ್ಸಿಗೆ ಅನುಮತಿ? ಗೊಂದಲಕ್ಕೆ ತೆರೆ ಎಳೆದ ಕೋರ್ಟ್!

- Advertisement -

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ನಿಷೇಧ ವಿಚಾರವಾಗಿ ಉಂಟಾಗಿದ್ದ ಬಹಳಷ್ಟು ಗೊಂದಲಗಳು ಉಂಟಾಗಿತ್ತು. ಈಗ ಇದಕ್ಕೆ ಖುದ್ದು ಕರ್ನಾಟಕ ಹೈಕೋರ್ಟ್ ತೆರೆ ಎಳೆದಿದೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಎಂದು ಸಿಜೆ ವಿಭು ಬಕ್ರು ಮತ್ತು ನ್ಯಾಯಧೀಶರಾದ ಸಿ.ಎಂ.ಜೋಶಿ ಅವರಿದ್ದ ಪೀಠ ಸ್ಪಷ್ಟನೆ ನೀಡಿದೆ.

ಆ ಮೂಲಕ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲಾಗಿದೆ ಎನ್ನುವ ಸುದ್ದಿಗೆ ಸ್ಪಷ್ಟನೆ ಸಿಕ್ಕಿದ್ದು, ಬೈಕ್ ಟ್ಯಾಕ್ಸಿ ನಿಷೇಧ ವಿಚಾರ ಇನ್ನೂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿ. ಹೀಗಾಗಿ ಮುಂದೆ ಕೋರ್ಟ್ ಯಾವ ತೀರ್ಪು ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ. ಹೈಕೋರ್ಟ್‌ ವಿಚಾರಣೆಯ ವೇಳೆ, ರಾಜ್ಯದಲ್ಲಿ ಬೈಕ್‌ ನಷೇಧವಿದ್ದರೂ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ಜನರಲ್ಲ ಕೆ. ಶಶಿಕಿರಣ್‌ ಶೆಟ್ಟಿ ಮಾಹಿತಿ ನೀಡಿದರು.

ಈ ವೇಳೆ ಪ್ರತಿಕ್ರಯಿಸಿದ ನ್ಯಾಯಪೀಠ, ಬೈಕ್‌ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್‌ ಆದೇಶಿಸಿಲ್ಲ. ಈ ಬಗ್ಗೆ ಪ್ರಸ್ತಾವನೆ ಬಗ್ಗೆ ಸರ್ಕಾರ ಪರಿಶೀಲಿಸುತ್ತಿರುವ ಹಿನ್ನಲೆ ಬೈಕ್‌ ಟ್ಯಾಕ್ಸಿ ಮಾಲೀಕರು, ಚಾಲಕರ ಮೇಲೆ ಕ್ರಮ ಬೇಡವೆಂದು ಹೇಳಿದ್ದೆವು. ಬೈಕ್‌ ಟ್ಯಾಕ್ಸಿ ಅಗ್ರಿಗೇಟರ್‌ ಕಂಪನಿಗಳ ಬಗ್ಗೆ ನಾವು ಹೇಳಿಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಇನ್ನು ಬೈಕ್‌ ಟ್ಯಾಕ್ಸಿ ಚಾಲಕರ ಪರವಾಗಿ ವಕೀಲ ಗಿರೀಶ್‌ ಕುಮಾರ್‌ ಹಾಜರಾಗಿ ವಾದ ಮಂಡಿಸಿದ್ದು, ಸರ್ಕಾರ ಅಪ್ಲಿಕೇಶನ್‌ ವಿರುದ್ಧ ಕ್ರಮಕೈಕೊಳ್ಳಬಹುದು. ಅಪ್ಲಿಕೇಶನ್‌ ಆಧರಿಸಿ ಸೇವೆ ನೀಡುವ ಟ್ಯಾಕ್ಸಿಗಳ ಮೇಲೆ ಅಲ್ಲ. ಬೈಕ್‌ ಟ್ಯಾಕ್ಸಿ ಸೀಜ್‌ ಮಾಡಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್ಲ ಕೆ. ಶಶಿಕಿರಣ್‌ ಶೆಟ್ಟಿ, ಈ ಆರೋಪ ಸರಿಯಲ್ಲ. ನಾವು ಅವರನನ್ನು ಬಂಧಿಸುವುದಿಲ್ಲ ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಹೈಕೋರ್ಟ್‌ ವ್ಯಕ್ತಿಗಳಿಗೆ ತೊಂದರೆ ಕೊಡಬೇಡಿ ಎಂದು ಹೇಳಿತು.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss