ಅನೂಪ್ ಭಂಡಾರಿ ಮತ್ತು ಸುದೀಪ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಚಿತ್ರ ಫ್ಯಾಂಟಮ್. ಚಿತ್ರದ ಮೊದಲ ಹಂತದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಎರಡನೇ ಹಂತದ ಶೂಟಿಂಗ್ ಕೆಲ ದಿನಗಳಲ್ಲೇ ಶುರುವಾಗಲಿದೆ.
ಮಹಾಬಲೇಶ್ವರ ಮತ್ತು ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದ್ದು, ಹೈದರಾಬಾದ್‌ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಸಲು ಫ್ಯಾಂಟಮ್ ಚಿತ್ರತಂಡ ನಿರ್ಧರಿಸಿದೆ.
ಫ್ಯಾಂಟಮ್ ಸಿನಿಮಾದಲ್ಲಿ ಸುದೀಪ್ ಜೊತೆ ಅನೂಪ್ ಸಹೋದರ ನಿರೂಪ್ ಕೂಡ ವಿಶೇಷ ಪಾತ್ರದಲ್ಲಿ ಕಾಣಸಿಗಲಿದ್ದಾರೆ.

ವಿಕ್ರಾಂತ್ ರೋಣ ಎಂಬ ಪಾತ್ರಕ್ಕೆ ಬಣ್ಣ ಹಚ್ಚಿರುವ ಸುದೀಪ್, ಈ ಚಿತ್ರದಲ್ಲಿ ಇಬ್ಬರು ನಾಯಕಿಯರೊಂದಿಗೆ ರೊಮ್ಯಾನ್ಸ್ ಮಾಡಲಿದ್ದಾರೆ.
ಈ ಮೊದಲು ಚಿತ್ರದಲ್ಲಿ ಸಮಂತಾ ಅಕ್ಕಿನೇನಿ ನಟಿಸಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದ್ರೀಗ ಫ್ಯಾಂಟಮ್ ಸಿನಿಮಾದಲ್ಲಿ ಶ್ರದ್ಧಾಶ್ರೀನಾಥ್ ನಟಿಸಲಿದ್ದಾರೆಂಬ ಮಾಹಿತಿ ಇದೆ. ಅಲ್ಲದೇ ಬೆಂಗಳೂರು ಮೂಲದ ರೂಪದರ್ಶಿ ನೀತು ಎಂಬುವವರು ನಾಯಕಿಯಾಗಿ ನಟಿಸಲಿದ್ದಾರೆ.