Wednesday, July 2, 2025

Latest Posts

ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಘೋಷಣೆ: ಶಿವರಾಮ್ ಹೆಬ್ಬಾರ್

- Advertisement -

ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಹಾಗೂ ಎಸ್ಎಸ್ ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿರುವ 2500 ವಿದ್ಯಾರ್ಥಿಗಳಿಗೆ 10 ಸಾವಿರ ವಿಶೇಷ ಪ್ರೋತ್ಸಾಹ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಘೋಷಿಸಿದ್ದಾರೆ.

ಕಾರ್ಮಿಕ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಟ್ಟಡ ಕಾರ್ಮಿಕರು ಹಾಗೂ ರಾಜ್ಯದ ಇತರೆ ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಕೊಡಿಸಲಾಗುವುದು. ಇದಕ್ಕೆ ಬೇಕಾದ ವೆಚ್ಚವನ್ನು ಕಾರ್ಮಿಕ ಇಲಾಖೆ ಭರಿಸಲಿದೆ. ಅಲ್ಲದೆ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಪರೀಕ್ಷೆಯಲ್ಲಿ 600ಕ್ಕೂ ಹೆಚ್ವು ಅಂಕ ಪಡೆದಿರುವ 2500 ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನದ ಜತೆಗೆ 10 ಸಾವಿರ ರೂ. ವಿಶೇಷ ಧನ ನೀಡಲಾಗುವುದು. ಎಂದು ತಿಳಿಸಿದರು. ಸಭೆಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಕಾರಿ
ಎಂ.ಪಿ ಗುರುಪ್ರಸಾದ್ ಹಾಗೂ ಮಂಡಳಿಯ ಕಾರ್ಯದರ್ಶಿ ಮನೋಜ್ ಜೈನ್ ಮತ್ತು ಮಂಡಳಿಯ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

- Advertisement -

Latest Posts

Don't Miss