Thursday, July 31, 2025

Latest Posts

ರಾಬರ್ಟ್ಗೆ ಶುರುವಾದ ಪೈರೆಸಿ ಕಾಟ

- Advertisement -

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ಪೈರೆಸಿಯಾಗಿದೆ ಎಂದು ತಿಳಿದುಬಂದಿದೆ.

ಬಹು ನಿರೀಕ್ಷಿತ ರಾಬರ್ಟ್ ಸಿನಿಮಾ ನಿನ್ನೆಯಷ್ಟೇ(ಮಾರ್ಚ್ 11) ಬಿಡುಗಡೆಯಾಗಿತ್ತು. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿದ್ದು, ರಾಬರ್ಟ್ ಸಿನಿಮಾ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿದೆ. ರಾಬರ್ಟ್ ಸಿನಿಮಾ ಬಿಡುಗಡೆಗೊಂಡ ಮೊದಲ ದಿನವೇ 25 ಕೋಟಿ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆ ಬರೆದಿದೆ. ಇದರ ಬೆನ್ನೆಲ್ಲೇ ರಾಬರ್ಟ್ ಸಿನಿಮಾ ಪೈರೆಸಿಯಾಗಿದೆ ಎಂದು ತಿಳಿದುಬಂದಿದೆ.

ರಾಬರ್ಟ್ ಸಿನಿಮಾ ಬಿಡುಗಡೆ ಮುನ್ನವೇ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಪೈರೆಸಿ ಕುರಿತು ಎಚ್ಚರಿಕೆ ನೀಡಿದ್ದರು. ಸಿನಿಮಾವನ್ನು ಪೈರೆಸಿ ಮಾಡಿದರೆ, ಪೈರೆಸಿ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಕೋರ್ಟ್ ಕಚೇರಿ ಅಂತ ಜೀವನ ಪರ್ಯಂತ ತಿರುಗಾಡುವ ಹಾಗೆ ಮಾಡುತ್ತೇನೆ ಎಂದು ಪೈರೆಸಿ ಮಾಡುವವರಿಗೆ ಎಚ್ಚರಿಕೆ ನೀಡಿದ್ದರು.

- Advertisement -

Latest Posts

Don't Miss