- Advertisement -
International News: ದಕ್ಷಿಣ ಕೋರಿಯಾದಲ್ಲಿ 170 ಜನ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ದಕ್ಷಿಣ ಕೋರಿಯಾದ ಮೂವಾನ್ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಹಿಂದಿರುಗುತ್ತಿದ್ದ ಜೆಜು ಏರ್ ವಿಮಾನ ಲ್ಯಾಂಡ್ ಆಗುವಾಗ, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹಲವರಿಗೆ ಗಾಯವಾಗಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಬೆಂಕಿ ನಂದಿಸುವ ಕಾರ್ಯ ಪೂರ್ಣಗೊಂಡಿದ್ದು, ಮೃತರ ಕುಟುಂಬಕ್ಕೆ ಶರೀರವನ್ನು ಹಸ್ತಂತರಿಸುವ ಕೆಲಸ ನಡೆಯುತ್ತಿದೆ. ಅಲ್ಲದೇ, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
- Advertisement -