ಹಾಸನ : ನಗರದಲ್ಲಿ ಬೆಳ್ಳಂ ಬೆಳಿಗ್ಗೆ ನಗರಸಭೆ ಅಧಿಕಾರಿಗಳು ಪ್ಲಾಸ್ಟಿಕ್ ಬಳಕೆ ಮತ್ತುಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.ಅಂಗಡಿ ಮಾಲೀಕರಿಗೆ ಶಾಕ್ ನೀಡಿದ್ದಾರೆ.
ನಗರದ ಹಾಸನಾಂಬ ವೃತ್ತ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಸುಮಾರು ಎರಡು ಟ್ರ್ಯಾಕ್ಟರ್‌ಗೂ ಹೆಚ್ಚು ಪ್ಲಾಸ್ಟಿಕ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಕೊಂಡಿದ್ದಾರೆ. ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಹಾಗೂ ವ್ಯಾಪಾರ ಮಾಡದಂತೆ ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಅಧಿಕಾರಿಗಳು ನಗರಸಭೆ ಆಯುಕ್ತ ಸತೀಶ ನೇತೃತ್ವದಲ್ಲಿ ಗೋದಾಮುಗಳ ಮೇಲೂ ದಾಳಿ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡರು ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿದ್ದ ಅಂಗಡಿಗಳಿಗೆ ದಂಡ ವಿಧಿಸಿ ನಗರಸಭೆ ಸಿಬ್ಬಂದಿಗಳು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.
Sharavathi :ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ