Tuesday, April 15, 2025

Latest Posts

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಗೆಲುವು ಸಾಧಿಸಿದ ಸುಧಾಕರ್ ಬಣ, ಪ್ರದೀಪ್ ಈಶ್ವರ್‌ಗೆ ಮುಖಭಂಗ

- Advertisement -

Chikkaballapura: ಚಿಕ್ಕಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಸುಧಾಕರ್ ಬಣ ಗೆಲುವು ಸಾಧಿಸಿದೆ. ಬ್ಯಾಂಕ್ ಅಧ್ಯಕ್ಷರಾಗಿ ಗಂಗರೆ ಕಾಲುವೆ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಕಾಳೇಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾರಣ, ಚುನಾವಣೆ ನಡೆದಿದ್ದು, ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಮಾತನಾಡಿದ ಸಂಸದ ಡಾ.ಸುಧಾಕರ್, ರಾಜ್ಯದಲ್ಲಿಯೇ ಅತ್ಯುತ್ತಮವಾಗಿ ನಡೆಯುತ್ತಿರುವ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕ್‌ಗಳ ಪೈಕಿಚಿಕ್ಕಬಳ್ಳಾಪುರ ಪಿಎಲ್‌ಡಿ ಒಂದಾಗಿದ್ದು ಇಲ್ಲಿ ಭ್ರಷ್ಟಾಚಾರ ರಹಿತವಾಗಿ ಕಾಾರ್ಯಭಾರ ನಡೆಸಬೇಕು. ಉತ್ತಮ ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಇನ್ನು ಈ ಚುನಾವಣೆಯಲ್ಲಿ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಕ್ಕೆ, ಕಾಂಗ್ರೆಸ್‌ಗೆ ಮುಖಭಂಗವಾಗಿದೆ. ಸ್‌ವಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಸಚಿವ ಪ್ರದೀಪ್ ಈಶ್ವರ್ ಸೋಲನ್ನಪ್ಪಿದ್ದಾರೆ.

- Advertisement -

Latest Posts

Don't Miss