ಸಿಎಂ ಸಿದ್ದರಾಮಯ್ಯ ಮುಡಾ ಕೇಸ್ಗೆ ಇದೀಗ ಸ್ವತಃ ಪ್ರಧಾನಿ ನರೇಂದ್ರಮೋದಿಯವರೇ ಎಂಟ್ರಿ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಮಾನ ಹೊರರಾಜ್ಯದಲ್ಲೂ ಹರಾಜಾಗಿದೆ. ಪ್ರಧಾನಿ ಮೋದಿಯವ್ರೇ ಸಾರ್ವಜನಿಕ ಸಮಾವೇಶದಲ್ಲಿ ಸಿದ್ದರಾಮಯ್ಯಗೆ ಚಾಟಿ ಬೀಸಿದ್ದಾರೆ.
ಹರಿಯಾಣದಲ್ಲಿ ವಿಧಾನಸಭೆ ಚುನಾವಣೆ ನಡೀತಿದೆ. ಈ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಡಾ ಪ್ರಕರಣದ (MUDA) ಪ್ರಸ್ತಾಪವಾಗಿದೆ. ಸೋನಿಪತ್‌ನಲ್ಲಿ ಇವತ್ತು ಖುದ್ದು ಪ್ರಧಾನಿ ಮೋದಿ ಪ್ರಚಾರ ರ್ಯಾಲಿ ನಡೆಸ್ತಿದ್ರು. ಈ ವೇಳೆ ಮೋದಿಯವರು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆ ಆಗಲೇಬೇಕು ಅಂತ ಹರಿಯಾಣದಲ್ಲಿ ಒತ್ತಾಯಿಸಿದ್ದಾರೆ.
ಸಾರ್ವಜನಿಕ ರ‍್ಯಾಲಿಯಲ್ಲಿ ಮಾತಾಡಿದ ಪ್ರದಾನಿ ಮೋದಿ, ಸಿದ್ದು ಜೊತೆ ಕಾಂಗ್ರೆಸ್ ಹೈಕಮಾಂಡ್ಗೂ ಚಾಟಿಬೀಸಿದ್ರು. ಹೈಕಮಾಂಡ್ ಭ್ರಷ್ಟವಾದಾಗ ಕೆಳಗೆ ಇರೋರಿಗೆ ಲೂಟಿ ಹೊಡೆಯಲು ಪರ್ಮಿಷನ್ ಕೊಟ್ಟಂತೆ ಆಗುತ್ತೆ ಅಂದ್ರು. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಆಗಿದೆ. ಅಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ ನೋಡಿ. ಖುದ್ದು ಅಲ್ಲಿಯ ಮುಖ್ಯಮಂತ್ರಿ ವಿರುದ್ಧವೇ ಭೂ ಹಗರಣದ ಆರೋಪ ಕೇಳಿ ಬಂದಿದೆ. ಇದೇ ರೀತಿ ಭ್ರಷ್ಟಾಚಾರ ಮಾಡಿದವರಿಗೆ ಹರ್ಯಾಣದಲ್ಲಿ ಅವಕಾಶ ಕೊಡ್ತೀರಾ ಅಂತ ಪ್ರಶ್ನಿಸಿದ್ದಾರೆ.




