Sunday, September 8, 2024

Latest Posts

PM MODIಯವರಿಗೆ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯದಿಂದ ನೋಟಿಸ್ ಜಾರಿ..!

- Advertisement -

ಪ್ರಧಾನಿ ನರೇಂದ್ರ ಮೋದಿ(PM Modi)ಯವರಿಗೆ  ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು (Prayag Raj District Court) ಪ್ರಧಾನಮಂತ್ರಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ. ಭಾರತೀಯ ದಂಡ ಸಂಹಿತೆ (Indian Penal Code) ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು, ನಾವಿಕರು, ವಾಯು ಸೇನಾ ಸಿಬ್ಬಂದಿಗಳು ಬಳಸುವ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ. ಈ ಸಂಬಂಧ ಪಾಂಡೆ ಎಂಬ ವ್ಯಕ್ತಿ  ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯದಲ್ಲಿ  ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156 (3) ರ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು.ಭಾರತೀಯ ದಂಡ ಸಂಹಿತೆಯ ಪ್ರಕಾರ ಸೇನಾ ಸಮವಸ್ತ್ರವನ್ನು ಧರಿಸುವುದು ಕಾನೂನುಬಾಹಿರ. ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಪಿಎಂಒಗೆ ನೋಟಿಸ್ ಜಾರಿ ಮಾಡಿದೆ. ಕಳೆದ ವರ್ಷ ಜಮ್ಮುಮತ್ತುಕಶ್ಮೀರದ ನೌಶೇರಾ ಸೆಕ್ಟರ್ ನಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಸಮವಸ್ತ್ರ  ಧರಿಸಿ ಗಮನಸೆಳೆದಿದ್ದರು. ಈ ಸಂಬಂಧ ಪಾಂಡೆ ಅವರು ಕಳೆದ ಡಿಸೆಂಬರ್​ನಲ್ಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಯನ್ನು ಆರಂಭದಲ್ಲಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹರೇಂದ್ರ ನಾಥ್ (Chief Judicial Magistrate Harendra Nath) ತಿರಸ್ಕರಿಸಿದ್ದರು. ಈ ಪ್ರಕರಣ ನ್ಯಾಯಾಲಯದ ವ್ಯಾಪ್ತಿಯಲ್ಲಿ ವಿಚಾರಣೆ ನಡೆಸಲು ಬರುವುದಿಲ್ಲ. ನ್ಯಾಯವ್ಯಾಪ್ತಿ ಹೊಂದಿರುವ ಮ್ಯಾಜಿಸ್ಟ್ರೇಟ್ ಈ ವಿಷಯವನ್ನು ಆಲಿಸಬಹುದು ಎಂದು ಹೇಳಿ ಅದನ್ನು ತಿರಸ್ಕರಿಸಿದ್ದರು. ಈ ಆದೇಶವನ್ನು ಅವರು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ನಳಿನ್ ಕುಮಾರ್ ಶ್ರೀವಾಸ್ತವ ಅವರು ಪಿಎಂಒ ಮತ್ತು ವಕೀಲ ರಾಕೇಶ್ ನಾಥ್ ಪಾಂಡೆ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.ಈ ಸಂಬಂಧ ಮಾರ್ಚ್ 2 ರಂದು ವಿಚಾರಣೆ ನಡೆಸಲಿದೆ.

- Advertisement -

Latest Posts

Don't Miss