ದೇಶದಲ್ಲಿ ಕೊರೋನಾ ಎರಡನೇಯ ಅಲೆ ವ್ಯಾಪಕವಾಗಿ ಹರಡಿರುವ ಕಾರಣ, ಪ್ರಧಾನಿ ಮೋದಿ, ಎಲ್ಲಾ ರಾಜ್ಯದ ಸಿಎಂ ಜೊತೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಬುಧವಾರದಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.



ಇಡೀ ದೇಶದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ವ್ಯಾಪಿಸುತ್ತಿರುವುದು ಮಹಾರಾಷ್ಟ್ರ ಮತ್ತು ಕೇರಳದಲ್ಲಿ. ಕೇರಳದಿಂದ ಮಂಗಳೂರಿಗೆ ಜನ ಬರುವ ಕಾರಣಕ್ಕೆ ಇದೀಗ ಮಂಗಳೂರಿನಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಜಾತ್ರೆ, ಮದುವೆ, ಅಂತಿಮ ಸಂಸ್ಕಾರ ಹೀಗೆ ಕೆಲ ಕಡೆ 200ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ ಎಂದು ನಿಯಮ ತರಲಾಗಿದೆ.
ಇದೇ ಕಾರಣಕ್ಕೆ ಪ್ರಧಾನಿ ಮೋದಿ, ಮಾರ್ಚ್ 17ರಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಕೊರೊನಾ ತಡೆಗಟ್ಟುವ ಬಗ್ಗೆ ಮೋದಿ ಹಲವು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ ಲಾಕ್‌ಡೌನ್ ಆಗುವ ಸಾಧ್ಯತೆ ಕೂಡ ಹೆಚ್ಚಾಗಿದೆ. ಈಗಾಗಲೇ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲಾಗಿದ್ದು, ಇಡೀ ದೇಶ ಮತ್ತೆ ಕಳೆದ ವರ್ಷದಂತೆ ಲಾಕ್‌ಡೌನ್ ಆಗುವ ಸಾಧ್ಯತೆ ಇದೆ.
ಆದ್ರೆ ಸಿಎಂ ಯಡಿಯೂರಪ್ಪ ಈ ಬಗ್ಗೆ ಹಿರಿಯ ವೈದ್ಯರೊಂದಿಗೆ ಚರ್ಚೆ ನಡೆಸಿದ್ದು, ಲಾಕ್‌ಡೌನ್ ಅವಶ್ಯಕತೆ ಇಲ್ಲ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಮತ್ತು ಸ್ವಚ್ಛತೆ ಕಾಪಾಡುವುದು ಮುಖ್ಯವಾಗಿದೆ ಎಂದಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಯಾರೇ ಮಾಸ್ಕ್ ಹಾಕದೇ ಓಡಾಡಿದರೆ, ಅವರಿಗೆ ದಂಡ ವಿಧಿಸುವುದು ಗ್ಯಾರೆಂಟಿ ಎನ್ನಲಾಗಿದೆ.