ಕೋಲಾರ: ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದು, ಕಾಂಗ್ರೆಸ್‌ನದ್ದು 85 ಪರ್ಸೆಂಟ್ ಕಮಿಷನ್ ಗೆ ಖ್ಯಾತಿಯಾಗಿದೆ ಎಂದು ಆರೋಪಿಸುವ ಮೂಲಕ ಕೋಲಾರ ಜಿಲ್ಲೆಯಲ್ಲಿ ಭರ್ಜರಿ ಚುನಾವಣಾ ಪ್ರಚಾರನ್ನ ನಡೆಸಿದ್ದಾರೆ.
ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂದಟ್ಟಿ ಬಳಿ, ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಮೋದಿಗೆ, ಅದ್ದೂರಿಯಾಗಿ ಜನ್ರು ಸ್ವಾಗತ ಕೋರಿದ್ರು. ಸಮಾವೇಶದಲ್ಲಿ ಸಂಸದ ಎಸ್ ಮುನಿಸ್ವಾಮಿ 3.5 ಅಡಿಗಳ ಬುದ್ದ ಪ್ರತಿಮೆಯನ್ನು ಪ್ರದಾನಿ ಮೋದಿಯವರಿಗೆ ಕಾಣಿಕೆಯಾಗಿ ನೀಡಿದ್ರು. ಕೆದಂಟ್ಟಿ ಬಳಿ ಸುಮಾರು 200 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಲಾಗಿತ್ತು.
11.15 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಮೋದಿ ಸಬಿಕರ ಕಡೆ ಕೈ ಎತ್ತಿ ವಿಷ್ ಮಾಡುವ ಮೂಲಕ ಸಭಿಕರನ್ನು ಮೋದಿ ಮತ್ತಷ್ಟು ಉರಿದುಂಬಿಸುವಂತೆ ಮಾಡಿದ್ರು. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ 2000ಕ್ಕೂ ಹೆಚ್ಚು ಪೋಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 15 ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ಚುನಾವಣಾ ಪ್ರಚಾರವನ್ನು ಮಾಡಿದ್ದಾರೆ.
ಕಾಂಗ್ರೆಸ್ 85 ಪರ್ಸೆಂಟ್ ಕಮಿಷನ್ ಖ್ಯಾತಿ ಹೊಂದಿರುವ ಕಾರಣ ಜನರಿಗೆ ಇವರ ಸರ್ಕಾರದ ಮೇಲೆ ನಂಬಿಕೆಯೇ ಇಲ್ಲ. 1 ರೂಪಾಯಿ ಕಳುಹಿಸಿದರೆ ಜನರಿಗೆ ತಲುಪುವಷ್ಟರಲ್ಲಿ ಅದು 15 ಪೈಸೆಗೆ ಇಳಿಯುತ್ತದೆ ಎಂದು ಅವರ ಪ್ರಧಾನಿಯೊಬ್ಬರು ಹೇಳಿದ್ದಾರೆ. ಕಾಂಗ್ರೆಸ್ ಯಾವಾಗಲೂ ತುಷ್ಟೀಕರಣ ರಾಜಕಾರಣ ಮಾಡುತ್ತದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರಲ್ಲದೆ, ಭಾರತೀಯ ಜನತಾ ಪಾರ್ಟಿ ತೃಪ್ತಿಗಾಗಿಯೇ ಹೊರತು ಸಮಾಧಾನಕ್ಕಾಗಿ ಅಲ್ಲ. ಕಾಂಗ್ರೆಸ್ ಯಾವಾಗಲೂ ಭ್ರಷ್ಟಾರದಲ್ಲೇ ಬೆಳೆದಿದ್ದೆ. ಭ್ರಷ್ಟಾಚಾರದ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಬಿಜೆಪಿಯಿಂದ ಮಾತ್ರ ಸಾಧ್ಯವಾಗಿದೆ ಎಂದರು.
ನಾನು ಭ್ರಷ್ಟಾರದ ವಿರುದ್ಧ ಹೋರಾಟುತ್ತಿರುವುದರಿಂದ ಕಾಂಗ್ರೆಸ್ ನನ್ನನ್ನು ದ್ವೇಷಿಸುತ್ತಿದೆ. ಅವರು ನನಗೆ ಬೆದರಿಕೆ ಹಾಕುವುದರ ಜೊತೆಗೆ ನಿಂದನೆಯನ್ನೂ ಮಾಡ್ತಿದ್ದಾರೆ. ಈ ಬಾರಿಯ ಚುನಾವಣೆಗೆ ಕಾಂಗ್ರೆಸ್ ವಿಷದ ಹಾವು ಎಂಬ ವಿಷಯವನ್ನು ನನ್ನನ್ನು ಹಾವಿಗೆ ಹೋಲಿಸುತ್ತಿದ್ದಾರೆ. ಅವರಿಗೆ ಮೇ 10 ರಂದು ಕರ್ನಾಟಕದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಇನ್ನು ರಾಜ್ಯ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೆ ಮಾತ್ರ ಅಭಿವೃದ್ದಿ ಸಾಧ್ಯ, ಹಾಗಾಗಿ ಈ ಬಾರಿ ರಾಜ್ಯದಲ್ಲಿ ಬಹುಮತದ ಸರ್ಕಾರವನ್ನು ಅಡಳಿತ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್‌ನವರು ರೈತರಿಗಾಗಿ ಏನೂ ಮಾಡಿಲ್ಲ. ಬಡವರನ್ನು ನಿರ್ಲಕ್ಷಿಸಿದ್ದಾರೆ. ಭರವಸೆಗಳನ್ನು ನೀಡಿ ಸುಮ್ಮನಾದರು, ಆದರೆ ನಾವು ರೈತರಿಗೆ ಖಾತೆಗೆ 2.5 ಕೋಟಿ ರೂಪಾಯಿಗಳನ್ನು ಕೊಟ್ಟಿದ್ದೇವೆ. ರೈತರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದೇವೆ ಈ ಬಾರಿಯ ವಿಧಾನಸಭೆ ಚುನವಣೆ ಯಾರೋ ಶಾಸಕ ಅಥವಾ ಸಚಿವರನ್ನಾಗಿ ಮಾಡಲು ನಡೆಯುತ್ತಿರುವ ಚುನಾವಣೆಯಲ್ಲ. ರಾಜ್ಯದ ಹಾಗೂ ದೇಶದ ಅಭಿವೃದ್ಧಿಯ ನಿರ್ಮಾಣ ಮಾಡುವಂತಹದ್ದು. ಮುಂದಿನ ಎರಡೂವರೆ ದಶಕಗಳ ವಿಕಾಸದ ಭಾರತವನ್ನಾಗಿ ಮಾಡುವ ಚುನಾವಣೆ ಇದಾಗಿದೆ, ಅಸ್ಥಿರದ ಸರ್ಕಾರ ಬಂದರೆ ಪ್ರಗತಿ ಆಗುವುದಿಲ್ಲ. ಇದರಿಂದ ನಷ್ಟವೇ ಜಾಸ್ತಿ. ದೇಶದ ಪ್ರಗತಿಗೆ ಬೇಕಾದ ಯೋಜನೆಗಳನ್ನು ನಿರ್ಧಾರ ಮಾಡಲು ಅಸ್ಥಿರ ಸರ್ಕಾರ ಅಡ್ಡಿಯಾಗುತ್ತದೆ. ಭ್ರಷ್ಟಾಚಾರದಿಂದ ಕರ್ನಾಟಕವನ್ನು ಮುಕ್ತಗೊಳಿಸುವುದೇ ಈ ಬಾರಿಯ ಚುನಾವಣೆ ಗುರಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಒಟ್ಟಾರೆ ಪ್ರಧಾನಿ ನರೇಂದ್ರ ಮೋದಿ ಇಂದು ಚನ್ನರಾಯಪಟ್ಟಣ ಹಾಗೂ ಬೇಲೂರಿನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದು, ಸಂಜೆ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಎರಡು ದಿನಗಳ ರಾಜ್ಯ ಚುನಾವಣಾ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್, ವಿಜಯಪುರ ಹಾಗೂ ಬೆಳಗಾವಿಯ ರಾಯಬಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡುವ ಮೂಲಕ ಚುನಾವಣೆಗೆ ರಣತಂತ್ರವನ್ನು ಮೋದಿ ರೂಪಿಸಿದ್ದಾರೆ.
ಗಾಂಧಿನಗರದಲ್ಲಿ ಸೋಲುವ ಭಯದಿಂದ ಕಾಂಗ್ರೆಸ್ ದಾಳಿ: ಬಿಜೆಪಿ ನಾಯಕರಿಂದ ಗಂಭೀರ ಆರೋಪ
ಇಂದು ಮಧ್ಯಾಹ್ನದವರೆಗೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಬಂದ್, ವಾಹನ ಸಂಚಾರ ನಿರ್ಬಂಧ..