Friday, April 18, 2025

Latest Posts

ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

- Advertisement -

ಬೆಂಗಳೂರು: ಪ್ರಧಾನಿ ಮೋದಿಯವರು ವನೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅನೇಕ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿರುವ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಅತಿ ಎತ್ತರದ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ.

ಪ್ರಧಾನಿ ಮೋದಿಯವರ ಕಾರ್ಯಕ್ರಮದ ವಿವರ ಹೀಗಿದೆ

ನವೆಂಬರ್ 11 ರಂದು ಪ್ರಧಾನಿ ಮೋದಿಯವರು ಆಗಮಿಸಿ ಮೊದಲಿಗೆ ಶಾಸಕರ ಭವನದ ಆವರಣದಲ್ಲಿ ಕನಕದಾ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಾದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಟರ್ಮಿನಲ್ -2 ಲೋಕಾರ್ಪಣೆ ಮಾಡಲಿದ್ದಾರೆ ನಂತರ ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆ, ಥೀಮ್ ಪಾರ್ಕ್ ಉದ್ಘಾಟನೆ ಮಾಡಿ, ವಿಮಾನ ನಿಲ್ದಾಣದ ಬಳಿ ಕೆಎಸ್ಎಸ್ಐಡಿಎಲ್ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಮೋದಿಯವರಿಗಾಗಿ ವಿಶೇಷ ಮೈಸೂರು ಪೇಟ ಸಿದ್ಧವಾಗಿದ್ದು, ಇದನ್ನು ಮೈಸೂರು ಕಲಾವಿದ ನಂದನ್ ಸಿದ್ಧಪಡಿಸಿದ್ದಾರೆ. ಮೈಸೂರು ರೇಷ್ಮೆ ಬನಾರಸ್ ಬಟ್ಟೆ ಬಳಸಿ ಕೆಂಪೇಗೌಡರು ಧರಿಸುತ್ತಿದ್ದ ಕೆಂಪು ಪೇಟ ಮಾದರಿಯದ್ದೇ ತಯಾರಿಸಲಾಗಿದೆ. ಇದನ್ನು ಸಾರ್ವಜನಿಕ ಸಭೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅರ್ಪಿಸಲಿದ್ದಾರೆ.

ಭಾರತದಲ್ಲೂ ನೌಕರರನ್ನು ಕೆಲಸದಿಂದ ತೆಗೆಯಲು ಮುಂದಾದ ಟ್ವೀಟರ್..!

ನ.6ಕ್ಕೆ ಹಾಸನ್ ಓಪನ್ ೨ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ..

- Advertisement -

Latest Posts

Don't Miss