Thursday, December 26, 2024

Latest Posts

ರಾಜಧಾನಿಗೆ ಪ್ರಧಾನಿ ಮೋದಿ ಭೇಟಿ.

- Advertisement -

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್​ 6ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ನಿರ್ಮಿಸಿರುವ ಲಾ ಕಾಲೇಜ್​​ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟಿಸಲಿದ್ದಾರೆ. ಇದೇ ಹಿನ್ನಲೆ ಸಚಿವರಾದ ಅಶ್ವಥ್​​ ನಾರಾಯಣ್​​, ವಿ.ಸೋಮಣ್ಣ ಪ್ರಧಾನಿ ಮೋದಿ ಸ್ವಾಗತಕ್ಕೆ ಸರ್ಕಾರದ ಪೂರ್ವ ತಯಾರಿ ಆರಂಭವಾಗಿದೆ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡ ಉದ್ಘಾಟನೆ ಹಿನ್ನೆಲೆಯಲ್ಲಿ ಡಿಸೆಂಬರ್​ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರಾದ ಅಶ್ವಥ್ ನಾರಾಯಣ್ ಹಾಗೂ ವಿ.ಸೋಮಣ್ಣ ಅವ್ರು, ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಾರ್ಯಕ್ರಮದ ಪೂರ್ವಬಾವಿ ತಯಾರಿ ವೀಕ್ಷಿಸಿದ್ರು. ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ರು. ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ.

- Advertisement -

Latest Posts

Don't Miss