Saturday, July 27, 2024

Latest Posts

ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ಪ್ರವೀಣರು: ಸಿಎಂ ಸಿದ್ದರಾಮಯ್ಯ

- Advertisement -

Political News: ಸಿಎಂ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದಲ್ಲಿ ಆಯೋಜಿಸಿದ್ದ “ಪ್ರಜಾಧ್ವನಿ” – ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ಅವರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.

ನರೇಂದ್ರ ಮೋದಿ ಅವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿಲ್ಲ. ಬೆಲೆಯೇರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿಲ್ಲ. ಅವರು ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಹತಾಶರಾದಂತಿದೆ. ದೇಶಕ್ಕೆ ಸಂಬಂಧಪಡದ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂವಿಧಾನದ 15 ಮತ್ತು 16ನೇ ಕಲಂನಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಹೇಳಲಾಗಿದೆ. ಅದರಲ್ಲಿ ಹಿಂದೂಗಳು, ಮುಸ್ಲಿಂಮರು, ಕ್ರಿಶ್ಚಿಯನ್ ಹಾಗೂ ಎಲ್ಲಾ ಜನರೂ ಬರುತ್ತಾರೆ. ಮುಸಲ್ಮಾನರಿಗೆ ಮೀಸಲಾತಿ ಕೊಡಲಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಸಂವಿಧಾನದ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಹಿಂದೂಗಳ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಬ್ಬ ಪ್ರಧಾನಮಂತ್ರಿಯಾಗಿ ಈ ರೀತಿ ಮಾತುಗಳನ್ನಾಡುವುದು ಅವರ ಸ್ಥಾನಕ್ಕೆ ಚ್ಯುತಿ ತರುವ ಕೆಲಸ. 1977ರಲ್ಲಿಯೇ ಹಾವನೂರು ಆಯೋಗ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಬೇಕೆಂದು ಶಿಫಾರಸ್ಸು ಮಾಡಿದೆ. ಚಿನ್ನಪ್ಪ ರೆಡ್ಡಿ ಆಯೋಗವೂ ಇದನ್ನೇ ಶಿಫಾರಸು ಮಾಡಿದೆ. 2004 ರಲ್ಲಿ ಕರ್ನಾಟಕದಲ್ಲಿ ಮುಸಲ್ಮಾನರಿಗೆ ಮೀಸಲಾತಿಯನ್ನು 2 ಬಿ ಅಡಿಯಲ್ಲಿ ಪ್ರಾರಂಭಿಸಲಾಯಿತು. 4% ಮೀಸಲಾತಿಯನ್ನು ಕೊಡಲು ಪ್ರಾರಂಭಿಸಲಾಯಿತು. 94ರಿಂದ ಈವರೆಗೆ ಮೀಸಲಾತಿ ಹಾಗೆ ಉಳಿದುಕೊಂಡು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮುಸಲ್ಮಾನರ 4% ಮೀಸಲಾತಿಯನ್ನು ತೆಗೆದುಹಾಕಿದರು. ಅದರ ವಿರುದ್ಧ ಮುಸಲ್ಮಾನ ಮುಖಂಡರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದರು. ಅದಕ್ಕೆ ಬಿಜೆಪಿ ಸರ್ಕಾರ ಅಫಿಡವಿಟ್ ಸಲ್ಲಿಸಿ ಯಥಾಸ್ಥಿತಿ ಮುಂದುವರೆಸುತ್ತೇವೆ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ನರೇಂದ್ರಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು. ಸುಪ್ರೀಂ ಕೋರ್ಟ್ ಆದೇಶದ ನಂತರ ಹಿಂದೆ ಅವರ ಸರ್ಕಾರವೇ ಮೀಸಲಾತಿ ಮುಂದುವರೆಸಿ ಈಗ ಹೊಸದಾಗಿ ಕೊಡಲಾಗುತ್ತಿದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳು. ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ಪ್ರವೀಣರು. ಮೀಸಲಾತಿ ಕುರಿತಾದ ಅವರ ಮಾತುಗಳು ಸೋಲುವ ಹತಾಶೆಯಿಂದ ಹೇಳಿರುವುದೇ ಹೊರತು ಯಾವುದೇ ಸಂವಿಧಾನಾತ್ಮಕ ಅಂಶಗಳಿಲ್ಲ ಎಂದು ಸಿಎಂ ಬಿಜೆಪಿ ಮತ್ತು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೆಲಸಕ್ಕೆ ರಿಸೈನ್ ಕೊಟ್ಟು, ಬಾಸ್ ಎದುರು ಢೋಲು ಬಾರಿಸಿ, ಡಾನ್ಸ್ ಮಾಡಿದ ಯುವಕ, ವೀಡಿಯೋ ವೈರಲ್

ಮತಗಟ್ಟೆಗೆ ಹೋಗಿ ಮತ ಚಲಾಯಿಸಿ ಬಂದ ಬಾಣಂತಿ, ಮಿಮಿಕ್ರಿ ಆರ್ಟಿಸ್ಟ್ ಇಂದುಶ್ರೀ..

ಮೋದಿ ಶೌಚಾಲಯ ಕಟ್ಟಿಸಿದ್ದಾರೆ. ಕಾಂಗ್ರೆಸ್‌ನವರು ಚೊಂಬು ಹಿಡ್ಕೊಂಡು ಓಡಾಡುತ್ತಿದ್ದಾರೆ: ಜೋಶಿ

- Advertisement -

Latest Posts

Don't Miss