ಹುಬ್ಬಳ್ಳಿ : ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಏಪ್ರಿಲ್ 05 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಏಪ್ರಿಲ್ 5ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿಲಿದ್ದಾರೆ. ಇದಲ್ಲದೆ ಏಪ್ರಿಲ್ 01 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆಯಾಗಬೇಕು. ವರಿಷ್ಠರು ಕರೆದಾಗ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದರು.




