Sunday, September 8, 2024

Latest Posts

ಭಾರತದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ…!

- Advertisement -

Technology News:

ಪೊಕೊ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ ಬಹು ನಿರೀಕ್ಷಿತ ಪೊಕೊ M5 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇಯೊಂದಿಗೆ ಕಂಡು  ಬಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಹೌದು, ಪೊಕೊ ಕಂಪೆನಿ ತನ್ನ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇನ್ನು ಟರ್ಬೊ RAM ಫೀಚರ್ಸ್‌ ಅನ್ನು ಹೊಂದಿದ್ದು, RAM ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಪೊಕೊ M5 ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು . ಇದು ಹೊಂದಿದೆ 30Hz ನಿಂದ 90Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸುತ್ತದೆ. ಈ ಡಿಸ್‌ಪ್ಲೇ 240Hz, DCI-P3 ಬಣ್ಣದ ಹರವುಗಳ ಟಚ್‌ ಸ್ಯಾಪ್ಲಿಂಗ್‌ ರೇಟ್‌ ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿರುತ್ತದೆ.

ಪೊಕೊ M5 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಪೊಕೊ M5 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಬ್ಯಾಟರಿಯು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳ ಪ್ಲೇಟೈಮ್ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಹೊಂದಿದೆ.

ಪೊಕೊ M5 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 12,499ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್ 6GB RAM + 128GB ಸ್ಟೋರೇಜ್ ಮಾದರಿಯ ಆಯ್ಕೆಗೆ 14,499ರೂ. ಬೆಲೆ ಹೊಂದಿದೆ. ಇದು ಐಸಿ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇದೇ ಸೆಪ್ಟೆಂಬರ್ 13 ರಿಂದ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ.

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇ ಸೇಲ್‌ ಸಮಯದಲ್ಲಿ, ಐಸಿಐಸಿಐ ಮತ್ತು ಆಕ್ಸಿಸ್ ಬ್ಯಾಂಕ್ ಕಾರ್ಡ್‌ ಮೂಲಕ ಈ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ 1,500ರೂ.ಗಳ ಫ್ಲಾಟ್ ರಿಯಾಯಿತಿಯನ್ನು ಪಡೆಯಬಹುದು. ಜೊತೆಗೆ ಪೊಕೊ ಡಿಸ್ನಿ+ ಹಾಟ್‌ಸ್ಟಾರ್‌ಗೆ ಉಚಿತ 1-ವರ್ಷದ ಚಂದಾದಾರಿಕೆಯನ್ನು ಮತ್ತು 6 ತಿಂಗಳ ಉಚಿತ ಸ್ಕ್ರೀನ್ ರಕ್ಷಣೆಯನ್ನು ನೀಡುತ್ತದೆ ಎಂದು ಹೇಳಿಕೊಳ್ಳಲಾಗಿದೆ.

ಹೊಸ ಸ್ಯಾಮ್ ಸಂಗ್ ಟ್ಯಾಬ್ ಅನಾವರಣ…!

ಡಿಸ್ನಿ+ ಹಾಟ್ಸ್ಟಾರ್, ಅಮೆಜಾನ್ ಪ್ರೈಮ್ ನ್ಲಲ್ಲಿ ಏರ್ ಟೆಲ್ ಬಂಪರ್ ಆಫರ್…!

ವಾಟ್ಸಾಪ್ ನಲ್ಲಿ ಮತ್ತೆ ಹೊಸ ಫೀಚರ್ಸ್…!

- Advertisement -

Latest Posts

Don't Miss