Political News: ಪೋಕ್ಸೋ ಕೇಸ್ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ (B.S.Yadiyurappa) ಸಿಐಡಿ ನೋಟಿಸ್ ನೀಡಿದೆ. ಇಂದೇ ಸದಾಶಿವನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣಗೆ ಸಹಕರಿಸುವಂತೆ ಸಿಐಡಿ ಬಿಎಸ್ವೈ ನೋಟಿಸ್ ನೀಡಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಾರ್ಚ್ 14ರಂದು ತಡರಾತ್ರಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಂಬಂಧ ಎಫ್‌ಐಆರ್ (FIR) ದಾಖಲು ಮಾಡಲಾಗಿತ್ತು. ನಂತರ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು.
ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರ ಸಹಾಯ ಪಡೆಯಲು ಫೆಬ್ರವರಿ 2ರಂದು ತಮ್ಮ ಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಆಗ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದರು. ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012ರ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354ಎ ಅಡಿ ಪ್ರಕರಣ ದಾಖಲಿಸಲಾಗಿತ್ತು. ಯಡಿಯೂರಪ್ಪ ಅವರನ್ನು ಮತ್ತೆ ಭೇಟಿ ಮಾಡಿದ ಸಂದರ್ಭದ ವಿಡಿಯೋವನ್ನು ಮಹಿಳೆ ಹಂಚಿಕೊಂಡಿದ್ದರು.
ಇನ್ನೂ ಯಡಿಯೂರಪ್ಪ ವಿರುದ್ಧ ಪೋಕ್ಸೋ (POCSO) ಅಡಿಯಲ್ಲಿ ದೂರು ದಾಖಲಿಸಿದ್ದ 53 ವರ್ಷದ ಮಹಿಳೆ ಕಳೆದ ತಿಂಗಳ 26ರಂದು ಮೃತಪಟ್ಟಿದ್ದಾರೆ. ಅನಾರೋಗ್ಯದಿಂದಾಗಿ ಬೆಂಗಳೂರಿನ ಹೊರಮಾವುನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ. ಅವರು 17 ವರ್ಷದ ಪುತ್ರಿ ಹಾಗೂ ಒಬ್ಬ ಪುತ್ರನನ್ನು ಅವರು ಅಗಲಿದ್ದಾರೆ.
ಪತ್ನಿ ಈ ಕೆಲಸ ಮಾಡುವುದಿಲ್ಲವೆಂದು ಡಿವೋರ್ಸ್ ಕೇಳಿದ ಪತಿ: ಈ ರೀತಿ ತೀರ್ಪು ನೀಡಿದ ಕೋರ್ಟ್