Wednesday, December 3, 2025

Latest Posts

ಪೋಕ್ಸೋ ಕೇಸ್: ಸುಪ್ರೀಂ ಮೊರೆ ಹೋದ BSY!

- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ, ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣ ಟ್ರಯಲ್ ಹಂತಕ್ಕೆ ಸಾಗಲು ಅವಕಾಶ ಮಾಡಿಕೊಟ್ಟಿತ್ತು. ಹೈಕೋರ್ಟ್ ತೀರ್ಪಿನ ನಂತರ, ಬೆಂಗಳೂರು 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಮತ್ತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆ, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ಇತರೆ ಮೂರು ಮಂದಿ ಆರೋಪಿಗಳು ಈಗ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅರ್ಜಿ ಸಲ್ಲಿಸಿದ್ದಾರೆ.

ಹಾಗಾದ್ರೆ ಏನಿದು ಪ್ರಕರಣ ಅನ್ನೋದನ್ನ ನೋಡೋದಾದ್ರೆ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಯಡಿಯೂರಪ್ಪ ವಿರುದ್ಧ ಕೇಳಿಬಂದಿತ್ತು. ಸಹಾಯಕ್ಕಾಗಿ ಮನೆಗೆ ಬಂದಿದ್ದರು ಎನ್ನಲಾದ ಆ ಬಾಲಕಿಯ ಮೇಲೆ ದೌರ್ಜನ್ಯ ನಡೆದಿದೆ ಎಂದು ಬಾಲಕಿಯ ತಾಯಿ ಮಾರ್ಚ್ 2024ರಲ್ಲಿ ದೂರು ದಾಖಲಿಸಿದ್ದರು.

ಪೋಕ್ಸೋ ಕಾಯ್ದೆಯಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ನಂತರ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರವು ತನಿಖೆಯನ್ನು CIDಗೆ ವರ್ಗಾವಣೆ ಮಾಡಿತ್ತು. ಸಾಕ್ಷ್ಯ ನಾಶಪಡಿಸಲು ಹಾಗೂ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪಗಳನ್ನೂ ಒಳಗೊಂಡಂತೆ, CID ಜೂನ್ 2024ರಲ್ಲಿ 750 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿತ್ತು. ಬಾಲಕಿಯ ತಾಯಿ ಹಾಗೂ ಬಾಲಕಿ ಇಬ್ಬರೂ ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ನಂತರ, ಬಾಲಕಿಯ ತಾಯಿ ಮೇ 26, 2024ರಂದು ನಿಧನರಾದರು.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss