Wednesday, December 4, 2024

Latest Posts

ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ: ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಉದ್ಘಾಟನೆ..!

- Advertisement -

Hubli News: ಹುಬ್ಬಳ್ಳಿ: ಪ್ರತಿ ದಿನ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿರುತ್ತೇವೆ. ಒತ್ತಡ ನಿವಾರಣೆ ಹಾಗೂ ಸದೃಢ ಆರೋಗ್ಯ ಹೊಂದಲು ದಿನನಿತ್ಯದ ಜೀವನದಲ್ಲಿ ವ್ಯಾಯಾಮ ಅತೀ ಮುಖ್ಯ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು.

ಇಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ತ್ರಿವರ್ಣ ಬಲೂನ್ ಹಾಗೂ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪೊಲೀಸರು ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಸಹಾಯಕವಾಗಿವೆ. ದಿನನಿತ್ಯ ವ್ಯಾಯಾಮಕ್ಕೆ ಒತ್ತು ನೀಡಬೇಕಾಗಿದೆ. ಯಾವುದಾದರೂ ಒಂದು ಕ್ರೀಡೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸದೃಢರಾದಾಗ ಮಾತ್ರ ಉತ್ತಮ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಸಂತೋಷಕುಮಾರ ಬಿರಾದಾರ್ ಮಾತನಾಡಿ, ಕ್ರೀಡಾ ಸ್ಫೂರ್ತಿಯನ್ನು ಮೆರೆಯಲು ಕ್ರೀಡಾಕೂಟ ಉತ್ತಮ ವೇದಿಕೆಯಾಗಿದೆ‌. ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಳೆಯ ನೆನಪುಗಳು ಮರಳಿ ಬರುತ್ತಿವೆ. ಶಿಸ್ತುಬದ್ಧವಾಗಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಪೊಲೀಸರು ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಮೂಲಕ ಸದೃಢರಾಗಬೇಕು. ದೈಹಿಕ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜೀವನ ಶೈಲಿ ಬದಲಾವಣೆಗೆ ಕ್ರೀಡೆ ಸಹಕಾರಿಯಾಗಿದೆ. ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಮಾತನಾಡಿ, ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಉತ್ತಮ ಮೆರುಗು ತರಲಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಪೊಲೀಸರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಕಡೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.

ಕಳೆದ ಬಾರಿ ಪುರುಷರ ವಿಭಾಗದಲ್ಲಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದ ವೆಂಕಟೇಶ ನಾಯ್ಕ ಅವರು ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿದರು. ಆರ್‌‌ಪಿಐ ಮಾರುತಿ ಹೆಗಡೆ ಅವರ ಮುಂದಾಳತ್ವದಲ್ಲಿ ಉತ್ತರ ವಿಭಾಗ, ದಕ್ಷಿಣ ವಿಭಾಗ, ಧಾರವಾಡ ವಿಭಾಗ, ಮಹಿಳಾ ವಿಭಾಗ, ಸಂಚಾರಿ ವಿಭಾಗ ಮತ್ತು ಸಿ.ಎ.ಆರ್. ವಿಭಾಗ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿದವು.

- Advertisement -

Latest Posts

Don't Miss