ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿಂದ ಹಿಜಾಬ್ ಅನುಮತಿ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿತ್ತು. ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ ಎಂದು ತಿಳಿಸಿ, ರಾಜ್ಯ ಸರ್ಕಾರದ ಸಮವಸ್ತ್ರ ನೀತಿ ಸಂಹಿತೆಯನ್ನು ಎತ್ತಿ ಹಿಡಿದಿತ್ತು. ಹೀಗೆ ತೀರ್ಪು ನೀಡಿದಂತ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಂತ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಹಿಜಾಬ್ ತೀರ್ಪು ನೀಡಿದ್ದ ಜಡ್ಜ್ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಎರಡನೇ ಆರೋಪಿಯನ್ನ ಕರ್ನಾಟಕ ಪೊಲೀಸರು ಬಂಧನ ಮಾಡಿದ್ದಾರೆ. ತಮಿಳುನಾಡಿನ ತಂಜಾವೂರಿನಲ್ಲಿ ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದರು.
ಬಂಧಿತ ಆರೋಪಿಯನ್ನ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಆರೋಪಿ ಹೆಚ್ಚಿನ ವಿಚಾರಣೆ ಒಳಪಡಿಸಲಾಗುವುದು. ಇದರಿಂದ ತನಿಖೆಗೆ ಸಹಕಾರಿಯಾಗಲಿದೆ. ಪ್ರಕರಣದ ಹಿಂದ ಯಾವ ಸಂಘಟನೆಗಳು ಇವೆ ತನಿಖೆ ನಡೀತಿದೆ. ಒಟ್ಟಾರೆ ಇಬ್ಬರೂ ಆರೋಪಿಗಳ ಬಂಧನವಾಗಿದೆ ಎಂದರು.




