ಕೌಟುಂಬಿಕ ಸಂಧಾನಕ್ಕೆ ಪೊಲೀಸರ ಮಧ್ಯಸ್ಥಿಕೆ: ಅವಮಾನ ತಾಳಲಾರದೇ ಯುವಕ ಆತ್ಮಹತ್ಯೆ..

Hubballi News: ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.‌

ನಿಖಿಲ್ ಕುಂದಗೋಳ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌
ನಿಖಿಲ್ ಹಾಗೂ ಪ್ರೀತಿ ಎಂಬ ಯುವತಿಯನ್ನು‌ ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ. ಆದ್ರೆ  ಕಳೆದ ಕೆಲ‌ ತಿಂಗಳಿಂದ ಪತಿ ಹಾಗೂ ಪತ್ನಿಯ ನಡುವೆ ವೈಷಮ್ಯ ಮೂಡಿತ್ತು. ಹೀಗಾಗಿ ನಿತ್ಯ ಜಗಳವಾಗುತ್ತಿತ್ತು. ಹೀಗಾಗಿ ಪತ್ನಿ ಪ್ರೀತಿ ನಿಖಿಲ್ ಕಿರುಕುಳ ನೀಡಿದ್ದಾನೆಂದು ಪೊಲೀಸರಿಗೆ ದೂರು ನೀಡಿದ್ದರು. ಕೇಶ್ವಾಪುರ ಪೊಲೀಸರು ನಿಖಿಲ್‌ನನ್ನು ಕರೆಸಿ ವಿಚಾರಣೆ ನಡೆಸಿದ್ದರು.

ಮದುವೆ ಸಂದರ್ಭದಲ್ಲಿ ಪತ್ನಿ ಮನೆಯವರು ಕೊಟ್ಟಿದ ವಸ್ತುಗಳು ಹಾಗೂ ವರದಕ್ಷಿಣೆ ಮರಳಿಸುವಂತೆ ಪೊಲೀಸರು ತಾಕೀತು ಮಾಡಿದ್ದರಂತೆ. ಇದರಿಂದ ಮನನೊಂದು ಪೊಲೀಸ್‌ ಠಾಣೆಯಿಂದ ಮನೆಗೆ ಬಂದ ನಿಖಿಲ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆದ್ರೆ ಪೊಲೀಸರ ಒತ್ತಡದಿಂದ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಈ‌ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಿಂದ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ.

ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಇನ್​ಸ್ಪೆಕ್ಟರ್​ನ ಮರ್ಮಾಂಗ ಕತ್ತರಿಸಿದ ಕಾನ್‌ಸ್ಟೇಬಲ್​

ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’

About The Author