ಹಾಸನ : ನಗರದ ಪೆನ್‌ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಪಿಎಸ್‌ಐ ಮಧು ಅವರು ರೌಡಿಶೀಟರ್, ಅಕ್ರಮ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಮನೆಗಳ ಮೇಲೆ ಡಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿ, ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಮಟ್ಕಾ ದಂಧೆ, ಕಳ್ಳತನ, ಬೆದರಿಕೆ, ಕೊಲೆ, ಗಾಂಜಾ ಮಾರಾಟ, ಬಿಡ್ ಸೇರಿ ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ 40 ಜನ ಆಕ್ಟಿವ್ ವ್ಯಕ್ತಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿ ಅನುಮಾನ ಬಂದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಲವರು ನಿರಂತರವಾಗಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಇನ್ಸ್ಪೆಕ್ಟರ್ ಮಧು ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ರೌಡಿಶೀಟರ್, ಮಟ್ಕಾ ದಂಧೆ, ಕಳ್ಳತನ ಪ್ರಕರಣದಲ್ಲಿ ಭಾಗಿಯಾಗುತ್ತಿರುವವರನ್ನು ಗುರುತಿಸಿ ದಾಳಿ ನಡೆಸಿದ್ದರು. ಈ ವೇಳೆ ಕೆಲವರು ಗಾಂಜಾ ಸೇವನೆಯಲ್ಲಿ ತೊಡಗಿರುವುದು ಕಂಡು ಬಂದಿದ್ದರಿAದ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ಪಟ್ಟಿಯಲ್ಲಿ ನೂರಕ್ಕೆ ಹೆಚ್ಚು ಜನರಿದ್ದು, ಯಾರು ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ ಎಂಬ ಮಾಹಿತಿ ಪಡೆದು ಅವರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗುತ್ತಿದೆ. ಪೆನ್‌ಷನ್‌ಮೊಹಲ್ಲಾ, ಶ್ರೀನಗರ, ಅಮಿರ್‌ಮೊಹಲ್ಲಾ, ತಣ್ಣೀರುಹಳ್ಳ, ವಲ್ಲಬಾಯಿ ರಸ್ತೆ ಸೇರಿ ವಿವಿಧ ಭಾಗಗಳಲ್ಲಿ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು ಚುರುಕು ಮುಟ್ಟಿಸಿದ್ದಾರೆ.
ಕಾಡಾನೆ ಸಮಸ್ಯೆ ನಿವಾರಣೆಗೆ ಅಗತ್ಯಕ್ರಮ, 15 ದಿನಗಳಲ್ಲಿ ರಸ್ತೆಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು ಭರವಸೆ
ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
ಸಿಎಂ ಸಿದ್ದರಾಮಯ್ಯರನ್ನ ಮಗನ ಮದುವೆ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..