Thursday, October 16, 2025

Latest Posts

ಡ್ರೋಣ್ ಪ್ರತಾಪನನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು..!

- Advertisement -

ಡ್ರೋಣ್ ಪ್ರತಾಪ್.. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿ ಸದ್ದು ಮಾಡುತ್ತಿರುವ ಹುಡುಗ. ಡ್ರೋಣ್ ತಯಾರಿಸಿದ್ದೇನೆಂದು ಹೇಳಿ ಎರಡು ವರ್ಷದಿಂದ ಸನ್ಮಾನ ಮಾಡಿಸಿಕೊಂಡು ಬಂದಿದ್ದ ಪ್ರತಾಪನ ಬಣ್ಣ ಸದ್ಯ ಬಯಲಾಗಿದ್ದು, ಈತ ಮಾಡಿದ ಎಡವಟ್ಟಿನಿಂದ ಪೊಲೀಸರ ಪಾಲಾಗಿದ್ದಾನೆ.

ಈ ಕೊರೊನಾ ಟೈಮಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಹೋಗುವುದನ್ನ ನಿಷೇಧಿಸಿದ್ದರೂ, ಪ್ರತಾಪ್ ಮಂಡ್ಯದಿಂದ ಬೆಂಗಳೂರಿಗೆ ಬಂದ. ಅಲ್ಲದೇ, ಪೊಲೀಸರು ಕ್ವಾರಂಟೈನ್‌ಲ್ಲಿರಲು ಸೂಚಿಸಿ, ಪ್ರತಾಪ್ ಕೈಗೆ ಸೀಲ್‌ ಮಾಡಿದ್ದರೂ ಕೂಡ, ಖಾಸಗಿ ವಾಹಿನಿಗೆ ಹೋಗಿ ಸಂದರ್ಶನ ಕೊಟ್ಟು ಬಂದಿದ್ದಾನೆ.

ಹೋಮ್‌ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಪೊಲೀಸರು ಡ್ರೋಣ್ ಪ್ರತಾಪನನ್ನು ಹುಡುಕುತ್ತಿದ್ದು, ಪ್ರತಾಪ್ ಮೈಸೂರಿನಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ಇದ್ದ. ಈ ವಿಷಯ ಬೆಂಗಳೂರು ಪೊಲೀಸರು ಮತ್ತು ಬಿಬಿಎಂಪಿ ಅಧಿಕಾರಿಗೆ ಗೊತ್ತಾಗಿದ್ದು, ಇಂದು ಮೈಸೂರಿನಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ತನ್ನ ಮೇಲೆ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ ಪ್ರತಾಪ್. ಈತನನ್ನು ಹುಡುಕಲು ಪೊಲೀಸರು ನಿನ್ನೆಯಿಂದ ಪ್ರಯತ್ನ ಪಟ್ಟಿದ್ದು ಇಂದು ಬೆಳಿಗ್ಗೆ ಮೈಸೂರಿನಲ್ಲಿ ತಲಘಟ್ಟಪುರ ಪೊಲೀಸರು ಪ್ರತಾಪ್‌ನನ್ನು ವಶಕ್ಕೆ ಪಡೆದಿದ್ದು, ಬೆಂಗಳೂರಿಗೆ ಕರೆತಂದಿದ್ದಾರೆ.

ಇನ್ನು ಬೆಂಗಳೂರಿಗೆ ತಂದು ಪ್ರತಾಪ್‌ರನ್ನ ಕ್ವಾರಂಟೈನ್ ಮಾಡಲಾಗುತ್ತದೆ. ಮತ್ತು ತದನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿ ಇದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss