political news:
ಎರಡು ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ಧಾರೆ. ಪಟ್ಟಿ ವೈರಲ್ ಆಗುತ್ತಿದ್ದಂತೆ ರಾಜ್ಯ ಬಿಜೆಪಿ ನಕಲಿ ಪಟ್ಟಿ ಬಗ್ಗೆ ಸ್ಪಷ್ಟನೆ ನೀಡಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದು, ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ರಾಜ್ಯದ ಜನತೆಯ ದಾರಿ ತಪ್ಪಿಸೋ ಕೆಲಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಪ್ರೀತಿಯಲ್ಲಿ ಬಿದ್ದು ಸಂಸಾರದಲ್ಲಿ ತೇಲಲು ಸಿದ್ದವಾಗಿರುವ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ