Friday, November 14, 2025

Latest Posts

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನ ನಿಧನಕ್ಕೆ ರಾಜಕೀಯ ಗಣ್ಯರಿಂದ ಸಂತಾಪ

- Advertisement -

Political news: ವೃಕ್ಷಮಾತೆ ಎಂದೇ ಹೆಸರಾಗಿದ್ದ ಸಾಲು ಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಮರಗಳನ್ನು ಮಕ್ಕಳಂತೆ ಕಂಡು ಬೆಳೆಸುತ್ತಿದ್ದ ತಿಮ್ಮಕ್ಕನಿಗೆ ಹಲವು ಪ್ರಶಸ್ತಿಗಳೂ ಲಭಿಸಿದೆ, ಎಣಿಸಲಾಗದಷ್ಟು ಸನ್ಮಾನವಾಗಿದೆ. ಆದರೆ ಇದೀಗ ಇಂಥ ಅಪರೂಪದ ವ್ಯಕ್ತಿತ್ವವುಳ್ಳ ಸಾಲು ಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ರಾಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ತಿಮ್ಮಕ್ಕನ ಸಾವಿಗೆ ಸಂತಾಪ ಸೂಚಿಸಿದ್ದು, ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೂಡ ಈ ಬಗ್ಗೆ ಸಂತಾಪ ವ್‌ಯಕ್ತಪಡಿಸಿದ್ದು, ಉಸಿರು ಚೆಲ್ಲಿದ “ವೃಕ್ಷಮಾತೆ” ಮರಗಳನ್ನೇ ತಮ್ಮ ಮಕ್ಕಳಂತೆ ಸಾಕಿ ಸಲಹಿದ ʻವೃಕ್ಷಮಾತೆʼ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ನಿಧನರಾದ ಸುದ್ದಿ ಅತೀವ ದುಖಃ ನೀಡಿದೆ. ನಿಸರ್ಗ ಪ್ರೀತಿಯ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದ ಅವರ ಅಸಾಮಾನ್ಯ ಬದುಕು ಮತ್ತು ಪರಿಸರಕ್ಕೆ ಅವರ ಕೊಡುಗೆ ಚಿರಸ್ಮರಣೀಯ. ವೃಕ್ಷಮಾತೆ ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕಾರ್ಯ ಸದಾ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿ ಉಳಿಯಲಿದೆ. ಓಂ ಶಾಂತಿ ಎಂದು ಡಿಸಿಎಂ ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಹ ತಿಮ್ಮಕ್ಕನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪರಿಸರಕ್ಕಾಗಿ ತಮ್ಮ ಇಡೀ ಬದುಕನ್ನೇ ಮುಡಿಪಿಟ್ಟು ಪ್ರಕೃತಿಗಾಗಿಯೇ ಬದುಕಿ ಬಾಳಿದ ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ನಾಡಿಗೆ ಅವರು ನೀಡಿರುವ ಕೊಡುಗೆ, ಅವರಿಂದ ದೊರೆತಿರುವ ಪ್ರೇರಣೆ ಅಜರಾಮರ. ಅಗಲಿದ ಆ ಚೇತನಕ್ಕೆ ಚಿರಶಾಂತಿ ದೊರೆಯಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಹೆಚ್ಡಿಕೆ ಸಂತಾಪ ಸೂಚಿಸಿದ್ದಾರೆ.

- Advertisement -

Latest Posts

Don't Miss