political news:
ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್ಪಿ ಆಕ್ಟ್ ಪ್ರಕಾರ ಎಫ್ಐಆರ್ ದಾಖಲಾಗಿದೆ. ಚುನಾವಣಾ ಸೆಕ್ಟರ್ ಅಧಿಕಾರಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಲಾಗಿತ್ತು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದು, ಅದರಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 28ರಂದು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದರು. ಆ ವೇಳೆ ಬಸ್ ಮೇಲಿಂದ ಕಲಾವಿದರತ್ತ 500 ರೂ. ನೋಟುಗಳನ್ನು ಎಸೆದಿದ್ದರು.
ಅರುಣ್ ಸಿಂಗ್ ಹೆಸರಿನಲ್ಲಿ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿ ಬಿಡುಗಡೆ…!
‘ಸಿದ್ದರಾಮಯ್ಯ ಸಮೀಕ್ಷೆ ಆಧರಿಸಿ ಚುನಾವಣೆ ಸ್ಪರ್ಧಿಸುತ್ತೇನೆ ಎನ್ನುವುದು ದುರಂತ’

