Tuesday, December 17, 2024

Latest Posts

ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ

- Advertisement -

Political News: ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಹ್ಲಾದ ಜೋಶಿ, ಲೋಕಸಭೆ ಚುನಾವಣೆ 2024ರಲ್ಲಿ ಸೋಲು ಕಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ, ಆಡಳಿತವನ್ನು ದುರುಪಯೋಗ ಮಾಡಿ ಮನಬಂದಂತೆ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಯಡಿಯೂಪ್ಪ ಅವರ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕವಾಗಿ ಅಸ್ವಸ್ಥಳು. ದುರುದ್ದೇಶದಿಂದ ದೂರು ನೀಡಿದ್ದಾಳೆ. ಆಕೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಕೇಸ್ ಗಳನ್ನು ದಾಖಲಿಸಿದ್ದಾಳೆ ಎಂದು ಗೃಹ ಮಂತ್ರಿಗಳೇ ಹೇಳಿದ್ದರು. ಈಗ ನಿಮ್ಮ ದುರಾಡಳಿತವನ್ನು ಮರೆಮಾಚಲಿಕ್ಕೆ 81 ವರ್ಷದ ಬಿಜೆಪಿ ವರಿಷ್ಠರಾದ ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಎಳೆಯುತ್ತಿರುವುದು ರಾಜಕೀಯ ವೈಶಮ್ಯವಷ್ಟೇ. ನಿಮ್ಮ ಈ ದುರ್ಬುದ್ದಿಗೆ ನೀವು ತಕ್ಕ ಪಾಠ ಕಲಿಯಲಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಲಿ ಕೆಲಸಕ್ಕೆ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ: ಕಾಲು ಮುರಿತ

ದರ್ಶನ್ ಕೇಸ್ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದ್ರಜೀತ್‌ ಲಂಕೇಶ್ ಮಾತು

ಹಿಂದಿನ ಕೇಸ್‌ನಲ್ಲಿ ಕಠಿಣ ಕ್ರಮ ಕೈಗೊಂಡಿದ್ದರೆ, ಇಂದು ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

- Advertisement -

Latest Posts

Don't Miss