political news
ಇದೆ ಮಾರ್ಚ 18 ರಂದು ಮಂಗಳೂರು ಜಿಲ್ಲೆಯಲ್ಲಿ ಬಿಜೆಪಿಯ ಮಾಡುರುವ ಜನಾಬಿವೃದ್ದಿ ಕೆಲಸದ ಕುರಿತು ಜನರ ಗಮನಕ್ಕೆ ತರಲು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.ಮತ್ತು ಪ್ರಗತಿ ಯಾತ್ರೆಯನ್ನು ಕೈಗೊಂಡಿದ್ದಾರೆ. ಮಾರ್ಚ 18 ರಿಂದ 21 ರವರೆಗೆ ಈ ಸಮಾವೇಶ ಉತ್ತರ ಜಿಲ್ಲೆಯ ಭಾಗಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ್ ತಿಳಿಸಿದ್ದಾರೆ.
ಇನ್ನ ಹಳಿಯಾಳದಲ್ಲಿ ನಡೆಯಲಿರುವ ವಿಜಯಸಂಕಲ್ಪ ಯಾತ್ರೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಚಾಲನೆ ನೀಡಲಿದ್ದು ಈ ಸಮಾವೇಶದಲ್ಲಿ ಬಿಜೆಪಿಯ ಹಲವು ನಾಯಕರು ಭಾಗವಹಿಸಲಿದ್ದಾರೆ.
ಯಾತ್ರೆಯ ಅಂಗವಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಮಾವೇಶಗಳು ನಡೆಯಲಿವೆ. ಕಾರವಾರದಲ್ಲಿ ನಡೆಯಲಿರುವ ಜಿಲ್ಲಾ ಮಹಿಳಾ ಸಮಾವೇಶದಲ್ಲಿ ಬಿಜೆಪಿ ನಾಯಕಿ ಹಾಗೂ ಸುಪ್ರೀಂ ಕೋರ್ಟ್ ವಕೀಲೆ ಮೀನಾಕ್ಷಿ ಲೇಖಿ ಭಾಗವಹಿಸಲಿದ್ದಾರೆ. ಯಲ್ಲಾಪುರದಲ್ಲಿಯೂ ಎಸ್’ಟಿ ರ್ಯಾಲಿ ನಡೆಯಲಿದೆ. ರೈತರ ಮತ್ತು ಪರಿಶಿಷ್ಟ ಜಾತಿಗಳ ಸಮಾವೇಶವನ್ನೂ ನಡೆಸಲಾಗುವುದು, ಇದಕ್ಕಾಗಿ ಸ್ಥಳದ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.ಯಾತ್ರೆಯು ಮಾರ್ಚ್ 21 ರಂದು ಮುಕ್ತಾಯಗೊಳ್ಳುತ್ತದೆ ಮತ್ತು ಅದೇ ದಿನ ಹಾನಗಲ್ ತಲುಪಲಿದೆ ಎಂದು ವೆಂಕಟೇಶ್ ನಾಯಕ್ ಮಾಹಿತಿ ನೀಡಿದರು.