political news:
ಈಗಿನ ರಾಜಕೀಯದಲ್ಲಿ ರಾಜಕಾರಣಿಗಳು ದಿನಕ್ಕೊಂದು ಕ್ಯಅತೆ ತೆಗೆಯುವ ಮೂಲಕ ಜನರ ಮಧ್ಯೆ ಇರುವ ಒಗ್ಗಟ್ಟನ್ನು ಬೇರ್ಪಡಿಸಿ ತಮ್ಮ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಜನರ ಜೀವದ ಜೊತೆ ಅಟವನ್ನು ಆಡುತಿದ್ದಾರೆ. ಇದಕ್ಕೆ ವಿರುದ್ದವಾಗಿ ಸ್ಯಾಂಡಲ್ ವುಡ್ ನಟ ಕಿಶೋರ್ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.
ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ, ಇದು ಇಂದಿನ ಪ್ರಜಾಪ್ರಭುತ್ವ. ನಂಜೇಗೌಡ ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ? ಇತ್ತ ಟಿಪ್ಪುವನ್ನು ಕೊಂದವರೆಂದು ಹೇಳಿ ಮುಸ್ಲಿಮರನ್ನೂ ಒಕ್ಕಲಿಗರನ್ನೂ ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ? ಎಂದು ಪ್ರಶ್ನಿಸಿದರು.
ಮೊದಲು ಹಿಂದೂ ಮುಸ್ಲಿಂ ಅಂದರು ಮನೆಯ ಸದಸ್ಯರನ್ನು ಎತ್ತಿಕಟ್ಟಿದರು, ಗಾಂಧಿಯೆಂದರು, ಗಾಂಧಿ ಕೊಂದರು, ರೈತರನ್ನು ಭಯೋತ್ಪಾದಕರೆಂದರು, ಉರಿ ಹೊತ್ತಿಸಿದರು ನಂಜು ಕಾರಿದರು ಒಕ್ಕಲಿಗರೆಂದರು ಟಿಪ್ಪುವೆಂದರು ಬಿಹಾರಿಗಳೆಂದರು ತಮಿಳರೆಂದರು, ಧರ್ಮವೆಂದರು, ಜಾತಿಯೆಂದರು, ದಲಿತರೆಂದರು ಭಾಷೆಯೆಂದರು ದೇಶವೆಂದರು, ಇತಿಹಾಸ ತಿರುಚಿದರು, ಸುಳ್ಳು ಸುದ್ದಿ ಹರಡಿದರು. ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ವಸುದೇವ ಕುಟುಂಬಕಂನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು, ಚುನಾವಣೆಯ ಕಾಲವಿದು ಎಚ್ಚರ ಎಂದು ರಾಜಕೀಯದವರನ್ನು ಎಚ್ಚರಿಕೆಯಿಂದ ಇರುವಂತೆ ಹೇಳಿದ್ದಾರೆ.
ಸ್ಯಾಂಡಲ್‌ವುಡ್ ನಟ ನಟಿಯರು ಯುಗಾದಿ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದು ಹೀಗೆ..