Wednesday, June 19, 2024

Latest Posts

congress joining: ಕಾಂಗ್ರೆಸ್ಸಿನಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲ: ಲಿಂಬಿಕಾಯಿ

- Advertisement -

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಬಿಜೆಪಿಯಲ್ಲಿನ ಅಸಮಧಾನದ  ಕಾರಣ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸವಿದೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದರು.

ಬಿಜೆಪಿಯಲ್ಲಿನ ಅಸಂತೋಷದ ಕಾರಣ ಕಾಂಗ್ರೆಸ್‌ಗೆ ಬಂದಿದ್ದೇನೆ. ಯಡಿಯೂರಪ್ಪನವರಿಗೆ ಬಿಜೆಪಿಯಲ್ಲಿಯೇ ಇಕ್ಕಟ್ಟಿನ ಸ್ಥಿತಿಯಿದೆ ಕಾಂಗ್ರೆಸ್‌ನಲ್ಲಿ ನನಗೆ ಅನ್ಯಾಯವಾಗಲ್ಲಾ ಅನ್ನೋ ಭರವಸೆ ಇದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನಲ್ಲಿ ಪ್ರಭಲ ಆಕಾಂಕ್ಷಿಗಳಿಲ್ಲ ಎಂದು ಅವರು ಹೇಳಿದರು.

ಮಾಜಿ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವುದು ಸ್ವಾಗತಾರ್ಹ. ಜಗದೀಶ್ ಶೆಟ್ಟರ್ ಪ್ರಯತ್ನ ಅಭಿನಂದನಾರ್ಹ. ಶೆಟ್ಟರ್ ಎಮ್‌ಎಲ್‌ಸಿ ಆಗಿದ್ದು ಲೋಕಸಭೆಗೆ ಸ್ಪರ್ಧಿಸುವುದಿಲ್ಲಾ ಎಂದ ಅವರು, ಕುಂದಗೋಳದ ಮಾಜಿ ಶಾಸಕ ಎಸ್‌.ಐ. ಚಿಕ್ಕನಗೌಡರ್ ಕಾಂಗ್ರೆಸ್ ಸೇರುತ್ತಾರೆ ಎಂದು ಅವರು ಮಾಹಿತಿ ನೀಡಿದರು.

Flight : ವಿಮಾನ ಹಾರಾಟಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ..!

Cauvery Water : ಕಾವೇರಿ ಕಿಚ್ಚು ಕರ್ನಾಟಕ ಬಂದ್: ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು..?!

Khillari Ox : ಬೆಳಗಾವಿ : ಧಾಖಲೆ ಮೊತ್ತಕ್ಕೆ ಮರಾಟವಾದ ಖಿಲ್ಲಾರಿ ಎತ್ತು

- Advertisement -

Latest Posts

Don't Miss