Sunday, November 16, 2025

Latest Posts

Political News: ಕರ್ನಾಟಕದಲ್ಲಿ ಇರುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ: ಡಿಸಿಎಂ ಡಿಕೆಶಿ ಮನವಿ

- Advertisement -

Political News: ಬಿಹಾರದಲ್ಲಿ ಇದೇ ತಿಂಗಳು ಚುನಾವಣೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ್ತು ಕರ್ನಾಟಕದ ಯಾವುದೇ ಭಾಗದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿನಂತಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, 2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಕೆಲಸ ಮಾಡುತ್ತಿರುವ ಬಿಹಾರದ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಂಪನಿಗಳು, ಉದ್ಯಮಿದಾರರು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಿ, ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕರಿಸಬೇಕೆಂದು ವಿನಂತಿ ಮಾಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.

- Advertisement -

Latest Posts

Don't Miss