Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ.
ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು ಕೇಳಿದರೂ, ರಮ್ಯಾ ಭಾವುಕರಾಗಿ, ಸದ್ಯ ಏನೂ ಹೇಳುವ ಸ್ಥಿತಿಯಲ್ಲಿ ಇಲ್ಲ ಎಂಬಂತೆ ಮೌನವಾಗಿ ನಡೆದಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಧೀಮಂತ ನಾಯಕ,ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಡುವ ಮಾನ್ಯ ಶ್ರೀ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಓಂ ಶಾಂತಿ ಎಂದು ಪ್ರತಾಪ್ ಸಿಂಹ ಸಂತಾಪ ಸೂಚಿಸಿದ್ದಾರೆ.
ನಾಡು ಕಂಡ ಶ್ರೇಷ್ಠ ಮುತ್ಸದ್ದಿ ರಾಜಕಾರಣಿ,ಪಕ್ಷದ ಹಿರಿಯ ನಾಯಕರು ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬಿಜೆಪಿ ನಾಯಕ ಮುನಿರತ್ನ ಕೂಡ ಸಂತಾಪ ಸೂಚಿಸಿದ್ದಾರೆ.