Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ.
ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆಯ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ವಿಷಾದಿಸಿದ್ದಾರೆ.
ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ.
ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಅಂತ ಸಿದ್ದರಾಮಯ್ಯ ದುರ್ಘಟನೆಗೆ ಶೋಕ ವ್ಯಕ್ತಪಡಿಸಿದ್ದಾರೆ.
ಈ ಘಟನೆಗೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವಾಗಿದೆ..
ಇನ್ನೂ ಇದೇ ವಿಚಾರಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ವಿಜಯೋತ್ಸದ ಅಭಿನಂದನಾ ಸಮಾರಂಭದ ವೇಳೆ ಕಾಲ್ತುಳಿತದಿಂದ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಬೇಸರವಾಯಿತು ಎಂದು ಸಂತಾಪ ಸೂಚಿಸಿದ್ದಾರೆ.
ಅಭಿಮಾನಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದ್ದಾರೆ.
ಈ ಸಾವುಗಳಿಗೆ ಯಾರು ಹೊಣೆ? ಎಂದ ನಿಖಿಲ್..?
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ಆತುರ, ಸೂಕ್ತ ಭದ್ರತೆ ಕೈಗೊಂಡು, ಒಂದು ದಿನ ತಡವಾಗಿಯೇ ಕಾರ್ಯಕ್ರಮ ಆಯೋಜಿಸಬಹುದಿತ್ತು. ಈ ದಿನ ನಾವೆಲ್ಲರೂ ಸಂಭ್ರಮ ಕ್ಷಣದಲ್ಲಿರುವಾಗ, ಸಂಭ್ರಮದ ಬದಲಾಗಿ ಸೂತಕದ ಛಾಯೆ ಆವರಿಸಿದೆ. ಈ ಸಾವುಗಳಿಗೆ ಹೊಣೆ ಯಾರು.? ಎಂದು ಪ್ರಶ್ನಿಸಿದ್ದಾರೆ.
ಕೂಡಲೆ ಮೃತ ಅಭಿಮಾನಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅಭಿಮಾನಿಗಳಿಗೆ ನನ್ನದೊಂದು ಮನವಿ ಸುರಕ್ಷಿತವಾಗಿ ನಿಮ್ಮ ನಿಮ್ಮ ಮನೆಗಳಿಗೆ ತೆರಳಿ ಎಂದು ಅವರು ಕೋರಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನ ಬೌರಿಂಗ್ ಆಸ್ಪತ್ರೆಗೆ ತೆರಳಿ ಕ್ಷೇಮ ವಿಚಾರಿಸಿ, ಸಾಂತ್ವನ ಹೇಳಲಾಯಿತು.
ದುರಂತದಲ್ಲಿ ಒಟ್ಟು 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಗಂಭೀರ… pic.twitter.com/zFs3iv2xh1
— Nikhil Kumar (@Nikhil_Kumar_k) June 4, 2025