Political News: ಕಾಂಗ್ರೆಸ್ ಆಡಳಿತ ವೈಖರಿ ವಿರುದ್ಧ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

Political News: ಕೆಲ ದಿನಗಳ ಹಿಂದೆ ಮಾಜಿ ಸಚಿವ ಶ್ರೀರಾಮುಲು ಮತ್ತು ಜನಾರ್ಧನ್ ರೆಡ್ಡಿ ಸೇರಿ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಗಲಾಟೆ ನಡೆದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಈ ಗಲಾಟೆಗೆ ಕಾರಣ ಕಾಂಗ್ರೆಸ್ ಆಡಳಿತ ವೈಖರಿ ಎಂದು ಆರೋಪಿಸಿ, ಇಂದು ಬಿಜೆಪಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.

ಇದಕ್ಕೂ ಮುನ್ನ ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷದ ಗೂಂಡಾಗಿರಿಗೆ ಬಲಿಯಾದ ರಾಜಶೇಖರ ರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿ, ಶೋಕತಪ್ತ ಕುಟುಂಬದವರಿಗೆ ಸಾಂತ್ವನ ಹೇಳಿ, ಬಿಜೆಪಿ ವತಿಯಿಂದ 10 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಯಿತು. ಬಳಿಕ ಮತನಾಡಿರುವ ಆರ್.ಅಶೋಕ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂಬುದಕ್ಕೆ ಈ ರಕ್ತಸಿಕ್ತ ಘಟನೆಯೇ ಸಾಕ್ಷಿ. ಸಹಾಯಧನ ಆ ನೊಂದ ಕುಟುಂಬಕ್ಕೆ ತಾತ್ಕಾಲಿಕ ಪರಿಹಾರ ನೀಡಬಹುದೇ ಹೊರತು ಕಳೆದುಕೊಂಡ ಜೀವವನ್ನು ಮರಳಿ ತರಲಾರದು. ಆ ಸಂತ್ರಸ್ತ ಕುಟುಂಬಕ್ಕೆ ಸಿಗಬೇಕಾದ ನಿಜವಾದ ನ್ಯಾಯವೆಂದರೆ ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ. ಸ್ಥಳೀಯ ಪೊಲೀಸರ ಮೇಲೆ ಸರ್ಕಾರದ ಒತ್ತಡವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಆದ್ದರಿಂದ ಈ ಪ್ರಕರಣದ ಸಮಗ್ರ ಸತ್ಯಾಂಶ ಹೊರಬರಲು ಕೂಡಲೇ CBI ತನಿಖೆಗೆ ಒಪ್ಪಿಸಬೇಕು ಎಂಬುದು ನಮ್ಮ ಆಗ್ರಹ ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಿದ್ದರೂ ಅವರಿಗೆ ಶಿಕ್ಷೆಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದಿದ್ದಾರೆ.

About The Author