Political News: ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಧರ್ಮಸ್ಥಳದ ಬುರುಡೆ ಕೇಸ್ ವಿರುದ್ಧ ಬಿಜೆಪಿಗರು ಧರ್ಮಸ್ಥಳ ಚಲೋ ನಡೆಸಿದ್ದರು. ಸರ್ಕಾರ ಪ್ರಕರಣದ ವಿರುದ್ಧ ಸರಿಯಾದ ಕ್ರಮ ಕೈಗ“ಳ್ಳಬೇಕು ಎಂದು ಆಗ್ರಹಿಸಿದ್ದರು. ಇದನ್ನು ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದು, ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ! ಎಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿರುವ ಖರ್ಗೆ, ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯ ಎಂಬ ಎರಡು ತಲೆಯ ಹಾವು ಎರಡು ಕಡೆಯೂ ಹೆಡೆ ಆಡಿಸುತ್ತಿದೆ, ಬಿಜೆಪಿ ಆರೋಪಿಸುತ್ತಿರುವ ವ್ಯಕ್ತಿಗಳೂ ಬಿಜೆಪಿಯವರೇ, – ಗಿರೀಶ್ ಮಟ್ಟಣ್ಣನವರ್, ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಯುವಮೋರ್ಚಾದ ಅಧ್ಯಕ್ಷರಾಗಿದ್ದವರು, 2013ರಲ್ಲಿ ಗುರ್ಮಿಟ್ಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು.

– ಮಹೇಶ್ ಶೆಟ್ಟಿ ತಿಮರೋಡಿ, ಬಿಜೆಪಿ ಪಕ್ಷದಲ್ಲೇ ಇದ್ದವರು, ಸಂಘಪರಿವಾರದ ನಾಯಕರು, ಸದಾ ಸಾವರ್ಕರ್, ಗೋಲ್ವಾಲ್ಕರ್ ಫೋಟೋ ಇಟ್ಟುಕೊಂಡಿರುವವರು, ಕೇಸರಿ ಶಾಲು ಹಾಕಿಕೊಂಡಿರುವವರು. ಸಾವರ್ಕರ್ ಅನುಯಾಯಿಯ ಬಗ್ಗೆಯೇ ಬಿಜೆಪಿಗೆ ಅಸಹನೆ ಹೊಂದಿರುವುದು ಪರಮಾಶ್ಚರ್ಯ.

ಇವರೆಲ್ಲಾ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಬಣದವರಲ್ಲವೇ? ಅವರ ಅಣತಿಯಂತೆಯೇ ಇವರ ಹೋರಾಟ ನಡೆಯುತ್ತಿರುವುದಲ್ಲವೇ? ಬಿಜೆಪಿ ನಾಯಕರು ಉತ್ತರಿಸಬೇಕು ಎಂದು ಪ್ರಿಯಾಂಕ್ ಪ್ರಶ್ನಿಸಿದ್ದಾರೆ.

ಬಿಜೆಪಿಯ “ಧರ್ಮಸ್ಥಳ ಚಲೋ” ವೇದಿಕೆಯಲ್ಲಿ ಕರಾವಳಿಯ ಭಾಗದ ನಾಯಕರು ಮಾತನಾಡದೆ ವೇದಿಕೆ ಬಿಟ್ಟು ಹೋಗಿದ್ದೇಕೆ? ಕಲ್ಲಡ್ಕ ಪ್ರಭಾಕರ್ ಭಟ್ ಕಾಣಿಸಿಕೊಂಡಿಲ್ಲ ಏಕೆ? ಇದುವರೆಗೂ ಪ್ರಭಾಕರ್ ಭಟ್ ಧರ್ಮಸ್ಥಳದ ಪರವಾಗಿ ಒಂದೇ ಒಂದು ಹೇಳಿಕೆ ನೀಡದಿರುವುದೇಕೆ? ಕಲ್ಲಡ್ಕ ಭಟ್ಟರಿಗೆ “ಧರ್ಮಸ್ಥಳ” ಬೇಡವಾಗಿದೆಯೇ? ಧರ್ಮಸ್ಥಳ ಇಂದು ಇಬ್ಬರು ಸಂಘಪರಿವಾರದ ಮುಖಂಡರ ಪ್ರತಿಷ್ಠೆಯ #RSSvsRSS ಕಾಳಗದ ಕಣವಾಗಿದೆ, ಹೀಗಿರುವಾಗ ಬಿಜೆಪಿಯ ಹೋರಾಟ, ಹಾರಾಟ, ಚೀರಾಟ ಯಾರ ವಿರುದ್ಧ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿಗರಿಗೆ ಟಾಂಗ್ ನೀಡಿದ್ದಾರೆ.

About The Author