Political News: ತಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ಮುಷ್ಕರ ನಡೆಸುವುದಾಗಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಹೇಳಿದ್ದು, ಈ ಬಗ್ಗೆ ಬಿಜೆಪಿ ಶಾಸಕರಾದ ಸಿ.ಟಿ.ರವಿ ಸಿಬ್ಬಂದಿಗಳ ಪರ ಬ್ಯಾಟ್ ಬೀಸಿದ್ದಾರೆ.
ಜನರ ಜೀವ ಉಳಿಸಲು ಹಗಲಿರುಳು ಸೇವೆ ಸಲ್ಲಿಸುವ 108 ಆಂಬುಲೆನ್ಸ್ ಸಿಬ್ಬಂದಿಯ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿರುವುದು ಅತ್ಯಂತ ಖಂಡನೀಯ.
ಆರೋಗ್ಯ ಕ್ಷೇತ್ರದ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಕಾಂಗ್ರೆಸ್ ಸರ್ಕಾರ, ತುರ್ತು ಸಂದರ್ಭದಲ್ಲಿ ಜನರ ಪಾಲಿಗೆ ಜೀವನಾಡಿಯಾಗಿರುವ 108 ಸೇವೆಯ ಸಿಬ್ಬಂದಿಯ ಸಮಸ್ಯೆಗಳನ್ನು ಬಗೆಹರಿಸಲು ವಿಫಲವಾಗಿದೆ ಎಂದು ರವಿ ಹೇಳಿದ್ದಾರೆ.
ಜನರ ಜೀವದ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟು, ತಕ್ಷಣ ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸಿ 108 ಸೇವೆ ನಿರಂತರವಾಗಿ ಲಭ್ಯವಾಗುವಂತೆ ಮಾಡಬೇಕು.
ಮುಷ್ಕರದಿಂದ ಸಮಸ್ಯೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಯು. ಟಿ. ಖಾದರ್ ಹೇಳಿದ್ದಾರೆ. ಯಾರ ವಿರುದ್ಧ ಕಠಿಣ ಕ್ರಮ ಸಚಿವರೇ? ಆಂಬ್ಯುಲೆನ್ಸ್ ಚಾಲಕರನ್ನು ಮುಷ್ಕರಕ್ಕಿಳಿಸಿದ ರಾಜ್ಯ ಸರ್ಕಾರದ ವಿರುದ್ಧವೇ? ಎಂದು ಖಾದರ್‌ಗೆ ರವಿ ಪ್ರಶ್ನಿಸಿದ್ದಾರೆ.




