Political News: ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಕ್ಕೆ ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಉತ್ತರವಲ್ಲ ಎಂದಿರುವ ಸುನೀಲ್ ಕುಮಾರ್, ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕನ್ನು ಹತ್ತಿಕ್ಕಲು ಹಿಂಸೆಯ ಮಾರ್ಗವನ್ನು ಅನುಸರಿಸುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಆಗಿದ್ದೇನು..?
ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ಮೊಟ್ಟೆ ಎಸೆದಿದ್ದು, ಅಶ್ವತ್ ನಾರಾಯಣ್ ಸೇರಿ ಹಲವು ಬಿಜೆಪಿಗರ ಮೇಲೆ ರಾಡ್‌ನಿಂದ ದಾಳಿ ಮಾಡಲಾಗಿದೆ. ಈ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.
ಈ ದೂರಿನಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಮೇಲೆ ಬಿಜೆಪಿ ಮುತ್ತಿಗೆ ಯತ್ನ ನಡೆಸಿದ್ದು, ಈ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್, ಅಶ್ವತ್ಥ್ ನಾರಾಯಣ್ ಸೇರಿ ಹಲವು ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಮೊಟ್ಟೆ ಎಸೆದಿದ್ದು, ಹಲ್ಲೆ ನಡೆಸಿದೆ. ಅಲ್ಲದೇ ನಮ್ಮನ್ನು ವಶಕ್ಕೆ ಪಡೆದಿದ್ದ ಬಸ್ ಮೇಲೂ ದಾಳಿ ಯತ್ನ ನಡೆದಿದೆ. ಹೀಗಾಗಿ ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.




